Advertisement

ಮಾದಕ ವಸ್ತುಗಳು ಆರೋಗ್ಯಕ್ಕೆ ಮಾರಕ

11:09 AM Jun 29, 2019 | Suhan S |

ರಾಮನಗರ: ಸ್ನೇಹಿತರ ಒತ್ತಾಯಕ್ಕೋ ಅಥವಾ ಒತ್ತಡಕ್ಕೆ ಮಣಿದು ಮಾದಕ ವಸ್ತುಗಳನ್ನು ಸೇವಿಸಿದರೆ ಅದು ಮುಂದೆ ವ್ಯಸನವಾಗಿ ವಿವಿಧ ರೀತಿಯ ಮಾನಸಿಕ ಮತ್ತು ದೈಹಿಕ ಖಾಯಿಲೆಗಳಿಗೆ ಕಾರಣವಾಗುತ್ತವೆ ಎಂದು ಮನೋರೋಗ ತಜ್ಞ ಡಾ.ಎ.ಎಂ.ಆದರ್ಶ ಎಚ್ಚರಿಸಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ರಾಮನಗರ ಜಿಲ್ಲೆ ಮಾನಸಿಕ ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘಗಳ ವತಿಯಿಂದ ತಾಲೂಕಿನ ಅವ್ವೇರಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿ, ಹವ್ಯಾಸಕ್ಕೆಂದು ಆರಂಭವಾಗುವ ಮಾದಕ ವಸ್ತುಗಳ ಸೇವನೆ ವ್ಯಸನವಾಗುತ್ತದೆ. ಇತ್ತೀಚಿನ ಅಧ್ಯಯನದ ಪ್ರಕಾರ ಮಾದಕ ವಸ್ತುಗಳ ಸೇವನೆಯ ವಯಸ್ಸು 17 ವಯೋಮಾನದ ಯುವಕರಲ್ಲಿದೆ. ಮಾದಕ ವಸ್ತುಗಳ ಸೇವನೆಯಿಂದ ಶೇ.30ರಿಂದ 40 ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ತಿಳಿಸಿದರು.

ಕಾನೂನು ಉಲ್ಲಂಘಿಸಿದರೆ ಶಿಕ್ಷೆ: ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ವೆಂಕಟಪ್ಪ ಮಾತನಾಡಿ, ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರುದ್ಧ ಕಾಯ್ದೆಗಳು ಜಾರಿಯಲ್ಲಿವೆ. ಕಾನೂನು ಉಲ್ಲಂಘಿಸಿ ಮಾಡುವ ಕೃತ್ಯಗಳಿಗೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಕಾಯ್ದೆಗಳ ಬಗ್ಗೆ ವಿವರಣೆ ನೀಡಿದರು.

ಪೋಷಕರು ಮಕ್ಕಳ ಮೇಲೆ ನಿಗಾವಹಿಸಿ: ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಧಿಕಾರಿ ಡಾ.ಮಂಜುನಾಥ್‌ ಮಾತನಾಡಿ, ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ಕೂಡ ಕಾನೂನು ಅಪರಾದ. ಮೇಲಾಗಿ ವಸ್ತುಗಳನ್ನು ಸಾಗಿಸುವಾಗ ಅದನ್ನು ಬಳಸುವ ಅಪಾಯವೂ ಇದೆ. ಹೀಗಾಗಿ ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾವಹಿಸಬೇಕು ಎಂದರು.

ಕುಟುಂಬಗಳಲ್ಲಿ ಜಾಗೃತಿ ಮೂಡಿಸಿ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಶಿವಪ್ರಕಾಶ್‌ ಮಾತನಾಡಿ, ಬೀಡಿ, ಸಿಗರೇಟು, ಮಾದಕ ದ್ರವ್ಯಗಳ ಸೇವೆನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಏರ್ಪಡಿಸಿರುವ ಜಾಗೃತಿ ಕಾರ್ಯಕ್ರಮ ಇಂದಿನ ಯುವ ಸಮುದಾಯಕ್ಕೆ ಮಾರ್ಗದರ್ಶಿಯಾಗಿದೆ. ಮಾದಕ ಪದಾರ್ಥಗಳ ಸೇವನೆಯಿಂದಾಗುವ ಪರಿಣಾಮಗಳನ್ನು ಅರ್ಥೈಸಿಕೊಂಡು ವಿದ್ಯಾರ್ಥಿಗಳು ತಮ್ಮ ಕುಟುಂಬಗಳಲ್ಲಿ ಜಾಗೃತಿ ಮೂಡಿಸಿ ಎಂದು ಹೇಳಿದರು.

Advertisement

ಎಸ್‌ಆರ್‌ಎಸ್‌ ಕ್ಷೇತ್ರದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುನೀಲ್, ಕಾಲೇಜು, ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಹಾಜರಿದ್ದರು. ವೀಣಾ ಮತ್ತು ತಂಡದವರು ಪ್ರಾರ್ಥಿಸಿದರು. ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಪವಿತ್ರ ಸ್ವಾಗತಿಸಿದರು. ಮನೋಸಾಮಾಜಿಕ ಕಾರ್ಯಕರ್ತೆ ಪದ್ಮರೇಖಾ.ಎಸ್‌. ವಂದಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದಕ್ಷಿಣಾ ಮೂರ್ತಿ ನಿರೂಪಿಸಿದರು.

ಜಾಗೃತಿ ಜಾಥಾ: ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಜನರಲ್ಲಿ ಮಾದಕ ವಸ್ತಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಅವ್ವೇರಹಳ್ಳಿ ಗ್ರಾಪಂ ಆವರಣದಲ್ಲಿ ಆಟೋರಿಕ್ಷಾ ಪ್ರಚಾರಕ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸವಿತಾ ದೇವರಾಜು ಚಾಲನೆ ನೀಡಿದರು.

ತಾಪಂ ಸದಸ್ಯ ರೇಣುಕಾ ಪ್ರಸಾದ್‌, ಮಾಜಿ ಗ್ರಾಪಂ ಅಧ್ಯಕ್ಷ ಎಚ್.ಎಸ್‌. ದೇವರಾಜು, ಹಿರಿಯ ಆರೋಗ್ಯ ಪರೀಕ್ಷಕ ದಾಸಪ್ಪ, ಕಂಟ್ರಾಕ್ಟರ್‌ ತಮ್ಮಣ್ಣ, ಎಸ್‌ಡಿಎಂಸಿ ಅಧ್ಯಕ್ಷ ರಾಮಚಂದ್ರು, ವಲಯ ಅರಣ್ಯಾಧಿಕಾರಿ ಎ.ಎಲ್.ದಾಳೇಶ್‌, ಪಿಡಿಒ ವೆಂಕಟೇಶ್‌, ಮುಖಂಡ ಕಂಟ್ರಾಕ್ಟರ್‌ ಶಿವಲಿಂಗಯ್ಯ, ಶಿಕ್ಷಕರಾದ ಲತಾ, ಪುಷ್ಪ, ಲಿಂಗರಾಜಯ್ಯ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next