ಬೆಂಗಳೂರು: ಅಂತಾರಾಷ್ಟ್ರೀಯ ಡ್ರಗ್ಸ್ ಪೆಡ್ಲರ್‌ಗಳ ಜತೆ ಸಂಪರ್ಕ ಇಟ್ಟುಕೊಂಡು ನಗರಕ್ಕೆ ಮಾದಕ ವಸ್ತುಗಳನ್ನು ತರಿಸಿ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿ ಸಿದ್ದಾರೆ.
ನೈಜೀರಿಯಾದ ಜಿಯೋ ಎಮಾಕೊ(32) ಬಂಧಿತ. ಆರೋಪಿಯಿಂದ 20 ಲಕ್ಷ ರೂ. ಮೌಲ್ಯದ 200 ಗ್ರಾಂ ಎಂಡಿಎಂಎ-ಎಕ್ಸ್ಟೈಸಿ ಮಾತ್ರೆಗಳು ಮತ್ತು 100 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ಗಳು ವಶಕ್ಕೆ ಪಡೆಯಲಾಗಿದೆ. ಆರೋಪಿ ಐದು ವರ್ಷಗಳ ಹಿಂದೆ ವ್ಯವಹಾರಿಕ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದು, ರಾಮಮೂ ರ್ತಿನಗರದ ಒಎಂಬಿಆರ್ ಲೇಔಟ್‌ನಲ್ಲಿ ಬಾಡಿಗೆ ಮನೆ ಯಲ್ಲಿ ವಾಸವಾಗಿದ್ದ. ನಗರದಲ್ಲಿ ಸಣ್ಣ-ಪುಟ್ಟ ವ್ಯವಹಾರ ಮಾಡಿಕೊಂಡಿದ್ದ.
ಇದನ್ನೂ ಓದಿ;- ಕನ್ನಡ ಬೆಳವಣಿಗೆ ಮಾಧ್ಯಮದಲ್ಲಿ ಅಡಕ
ಜತೆಗೆ ಗೋವಾ ಮೂಲದ ವ್ಯಕ್ತಿಯೊಬ್ಬ ನಿಂದ ಡ್ರಗ್ಸ್‌ಗಳನ್ನು ತರಿಸುತ್ತಿದ್ದ ಎಂಬುದು ಗೊತ್ತಾಗಿದೆ. ಪೋಲ್ಯಾಂಡ್ ಮೂಲದ ವ್ಯಕ್ತಿಯೊಬ್ಬ ಪೋಸ್ಟ್ ಮೂಲಕ ಗೋವಾ ಮೂಲದ ವ್ಯಕ್ತಿಗೆ ಕಳುಹಿಸುತ್ತಿದ್ದು, ನಂತರ ಗೋವಾದಿಂದ ಬೆಂಗಳೂರು ಸೇರಿ ಭಾರತದ ಕೆಲವೊಂದು ನಗರಗಳಲ್ಲಿರುವ ಸಬ್ ಪೆಡ್ಲರ್‌ಗಳಿಗೆ ಸರಬರಾಜು ಮಾಡುತ್ತಿದ್ದ ಎಂದು ಆರೋಪಿ ವಿಚಾರಣೆ ಯಲ್ಲಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ಹೇಳಿದರು.
ಮಾದಕ ವಸ್ತುಗಳನ್ನು ತರಸಿಕೊಳ್ಳುತ್ತಿದ್ದ ಆರೋಪಿ ಜಿಯೋ ಎಮಾಕೊ ನಗರದಲ್ಲಿ ಐಟಿ-ಬಿಟಿ ಉದ್ಯೋಗಿಗಳು, ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡು ತ್ತಿದ್ದ ಎಂದು ಪೊಲೀಸರು ಹೇಳಿದರು. ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ