Advertisement
ನೀಲ್ ಕಿಶೋರಿಲಾಲ್ ರಾಮ್ ಜಿ ಶಾ(38), ನವಾಝ್ (35), ಕಿರಣ್ ರಾಜ್ ಶೆಟ್ಟಿ (24) ಮೂವರನ್ನು ಪ್ರತ್ಯೇಕ ಮಾದಕ ವಸ್ತು ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
Related Articles
Advertisement
ನವಾಝ್: ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಹೊಂದಿಕೊಂಡು ಕೇರಳ-ಕರ್ನಾಟಕದ ಗಡಿಭಾಗದಲ್ಲಿ ಮಾರಾಟ ಮಾಡುತ್ತಿದ್ದ ನವಾಝ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಕೇರಳದ ಗಡಿಭಾಗ ಹಾಗೂ ಮುಡಿಪು ಪರಿಸರದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ರವರ ನೇತೃತ್ವದಲ್ಲಿ ದಾಳಿ ನಡೆಸಿ ಒಟ್ಟು 15 ಗ್ರಾಂ ತೂಕದ ರೂ. 75,000/- ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, ಮೊಬೈಲ್ ಫೋನ್ -2, ಡಿಜಿಟಲ್ ತೂಕ ಮಾಪನ, ನಗದು ರೂ. 3200/- ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಬಜಾಜ್ ಅವೆಂಜರ್ ಬೈಕ್ ನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ನವಾಝ್ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ, ದರೋಡೆಗೆ ಸಂಬಂಧಪಟ್ಟಂತೆ ಒಟ್ಟು 8 ಪ್ರಕರಣಗಳು, ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ , ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಯತ್ನ ನಡೆಸಿದ ಪ್ರಕರಣ ಹೀಗೆ ಒಟ್ಟು 11 ಪ್ರಕರಣಗಳು ದಾಖಲಾಗಿರುತ್ತದೆ.
ಕಿರಣ್ ರಾಜ್ ಶೆಟ್ಟಿ: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಬೃಹತ್ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಪತ್ತೆ ಓರ್ವ ಆರೋಪಿಯ ಸೆರೆ ಹಿಡಿದಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಾರುತಿ ಅಲ್ಟೋ 800 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 27.100 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಾರುತಿ ಅಲ್ಟೋ 800 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ರಾಜೇಂದ್ರ ಬಿ ನೇತೃತ್ವದ ಸಿಸಿಬಿ ಪೊಲೀಸರು ನೀರುಮಾರ್ಗದ ಕುಟ್ಟಿಕಳ ಎಂಬಲ್ಲಿ ಪತ್ತೆ ಹಚ್ಚಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಕಿರಣ್ ರಾಜ್ ಶೆಟ್ಟಿಯನ್ನು ಬಂಧಿಸಿದ್ದಾರೆ.
ಆರೋಪಿಯ ವಶದಲ್ಲಿದ್ದ ಮಾರುತಿ ಅಲ್ಟೋ 800 ಕಾರನ್ನು ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ 27.100 ಕೆಜಿ ಗಾಂಜಾವನ್ನು, ಮೊಬೈಲ್ ಫೋನ್, ನಗದು ರೂ. 1500/- ಸ್ವಾಧೀನಪಡಿಸಿಕೊಳ್ಳಲಾಗಿದೆ.
ಆರೋಪಿ ಕಿರಣ್ ರಾಜ್ ಶೆಟ್ಟಿಯ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯು ಕರ್ನಾಟಕ- ಕೇರಳ ರಾಜ್ಯದ ಗಡಿಭಾಗದವನಾಗಿದ್ದು, ಕರ್ನಾಟಕ, ಕೇರಳದ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು, ಕೇರಳಕ್ಕೆ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದನು.