Advertisement

ಡ್ರಗ್ಸ್‌ ಮುಕ್ತ ಕರ್ನಾಟಕ ಬಿಜೆಪಿ ಗುರಿ

01:50 PM Sep 11, 2020 | Suhan S |

ಚಿಕ್ಕಬಳ್ಳಾಪುರ: ಡ್ರಗ್ಸ್‌ ಮಾಫಿಯಾದಲ್ಲಿ ಎಷ್ಟೇ ಪ್ರಭಾವಿ, ಗಣ್ಯರು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಅಡಿಯಲ್ಲಿ ಶಿಕ್ಷೆ ನೀಡಲು ಸರ್ಕಾರ ಸಿದ್ಧವಿದೆ. ಯಾರನ್ನು ರಕ್ಷಿಸುವ ಕೆಲಸ ಮಾಡುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಆಗ್ರಹಿಸಿದರು.

Advertisement

ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್‌ ಮುಕ್ತ ಕರ್ನಾಟಕ ಬಿಜೆಪಿ ಸರ್ಕಾರದ ಕನಸು. ಯುವ ಜನರ ಮೇಲೆ ಯಾವುದೇ ದುಷ್ಪರಿಣಾಮ ಬೀರದಂತೆ ತಡೆಯುವುದು ನಮ್ಮ ಧ್ಯೇಯ. ಡ್ರಗ್ಸ್‌ ಮಾಫಿಯಾದಲ್ಲಿ ಸಿಕ್ಕಿಬಿದ್ದಿರುವ ನಟಿ ರಾಗಿಣಿ ಬಿಜೆಪಿ ಸದಸ್ಯರಲ್ಲ. ಉಪ ಚುನಾವಣೆಯಲ್ಲಿ ಪಕ್ಷದ ಪರವಾಗಿ ಪ್ರಚಾರ ನಡೆಸಿರಬಹುದು ಅಷ್ಟೆ ಎಂದರು.

ಅವಿಭಜಿತ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ವರ ದಾನವಾಗಿರುವ ಎತ್ತಿನಹೊಳೆ ಯೋಜನೆಯನ್ನು ಮುಂದಿನ ವರ್ಷ ಜೂನ್‌ ತಿಂಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸಲು ಯೋಜನೆ ಹಾಕಿಕೊಂಡಿದ್ದು, ಈ ಯೋಜನೆಯಿಂದ ಬಯಲುಸೀಮೆ ಜನರಿಗೆ ಕುಡಿಯುವ ನೀರಿನ ಸಮಸ್ಯೆನಿವಾರಣೆಯಾಗಲಿದೆಎಂದರು.ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಕೇಶವಪ್ರಸಾದ್‌, ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ, ಮುಖಂಡ ಮರಳುಕುಂಟೆ ಕೃಷ್ಣಮೂರ್ತಿ, ಆವಲಗುರ್ಕಿ ಶ್ರೀನಿವಾಸ್‌ರೆಡ್ಡಿ, ಕಚೇರಿ ಕಾರ್ಯದರ್ಶಿ ಲಕ್ಷ್ಮೀಪತಿ, ಮಾಧ್ಯಮ ಪ್ರಮುಖ ವಿ.ಮಧುಚಂದ್ರ ಇದ್ದರು

Advertisement

Udayavani is now on Telegram. Click here to join our channel and stay updated with the latest news.

Next