Advertisement
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಎನ್ನೆಸ್ಸೆಸ್ ಘಟಕ ಮತ್ತು ಎಕೊನಾಮಿಕ್ ಆ್ಯಂಡ್ ನಾರ್ಕೊಟಿಕ್ ಕ್ರೈಮ್ ಪೊಲೀಸ್ ಠಾಣೆಯ ಸಹಯೋಗದಲ್ಲಿ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ನಡೆದ ಮಾದಕ ವಸ್ತು ಜಾಗೃತಿ ಅಭಿಯಾನದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಡಾ| ಕೆರೋಲಿನ್ ಪಿ. ಡಿ’ಸೋಜಾ ಅವರನ್ನು ಸ್ಮರಣಿಕೆ ನೀಡಿ ಸಮ್ಮಾನಿಸಲಾಯಿತು. ಹೆಡ್‌ಕಾನ್‌ಸ್ಟೆಬಲ್ ಲಕ್ಷ್ಮೀಶ್, ಕಾಲೇಜಿನ ಎನ್‌ಎಸ್‌ಎಸ್ ಘಟಕಾಧಿಕಾರಿ ಡಾ| ಗಾಯತ್ರಿ ಮತ್ತಿತರರಿದ್ದರು.
Related Articles
Advertisement
ಪೊಲೀಸರ ಕರ್ತವ್ಯ ಪ್ರಜ್ಞೆ ಪ್ರಶಂಸನೀಯಕಾಲೇಜಿನ ಪ್ರಾಂಶುಪಾಲ ಡಾ| ಉದಯ ಕುಮಾರ್ ಎಂ.ಎ. ಅವರು ಮಾತನಾಡಿ, ವಿದ್ಯಾರ್ಥಿಗಳು ಅನೌಪಚಾರಿಕ ಸ್ಥಳಗಳಲ್ಲಿ ಕಾಣಿಸಿ ಕೊಂಡರೆ, ಅಹಿತಕರ ಘಟನೆಗಳಲ್ಲಿ ಪಾಲ್ಗೊಂಡರೆ, ಪೊಲೀಸ್ ಅಧಿಕಾರಿಗಳು ಅವರ ಚಲನವಲನಗಳ ಮೇಲೆ ಕಣ್ಣಿಟ್ಟು ಮಾಹಿತಿ ನೀಡುತ್ತಾರೆ ಎಂದು ಹೇಳಿ ಪೊಲೀಸ್ ಇಲಾಖೆಯ ಕರ್ತವ್ಯ ಪ್ರಜ್ಞೆಯನ್ನು ಪ್ರಶಂಸಿಸಿದರು.