ಬೆಂಗಳೂರು: ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ಮಹಿಳೆ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿಷ್ಣುಪ್ರಿಯಾ (37) ಮತ್ತು ಸಿಗಿಲ್ ವರ್ಗೀಸ್(35) ಬಂಧಿತರು. ಆರೋಪಿಗಳಿಂದ 5 ಲಕ್ಷ ರೂ. ಮೌಲ್ಯದ 11.37 ಗ್ರಾಂ ತೂಕದ ಎಂಡಿಎಂಎ ಪಿಲ್ಸ್‌ಗಳು ಮತ್ತು 0.53 ಗ್ರಾಂ ತೂಕದ 44 ಎಲ್‌ಎಸ್‌ಡಿ ಸ್ಟ್ರಿಪ್ಸ್‌ಗಳು, 2 ಮೊಬೈಲ್‌ಗಳು ಮತ್ತು ಒಂದು ಬೈಕ್ ವಶಕ್ಕೆಪಡೆಯಲಾಗಿದೆ.
ಆರೋಪಿಗಳು ಕೇರಳ, ಮಂಗಳೂರು ಹಾಗೂ ಆಫ್ರಿಕಾ ಮೂಲದ ವ್ಯಕ್ತಿ ಗಳ ಮೂಲಕ ಮಾದಕ ವಸ್ತು ತರಿಸಿಕೊಂಡು ದಂಧೆ ನಡೆಸುತ್ತಿದ್ದರು. ಬಳಿಕ ಎಲೆಕ್ಟ್ರಾನಿಕ್ ಸಿಟಿ, ಪರಪ್ಪನ ಅಗ್ರಹಾರ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಬೆಲೆಗೆ ಪರಿಚಯಸ್ಥ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ಕಳೆದ ಮಾರ್ಚ್‌ನಲ್ಲಿ ಹುಳಿ ಮಾವು ಠಾಣೆ ವ್ಯಾಪ್ತಿಯಲ್ಲಿ ಆರೋಪಿ ಗಳನ್ನು ಡ್ರಗ್ಸ್ ಕೇಸ್‌ನಲ್ಲಿ ಬಂಧಿಸಲಾಗಿತ್ತು. ಬಳಿಕ ಜಾಮೀನು ಪಡೆದುಕೊಂಡು ಬಿಡುಗಡೆಯಾಗಿದ್ದರು ಎಂದು ಪೊಲೀಸರು ಹೇಳಿದರು.
ಆರೋಪಿಗಳ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.