ದೇವನಹಳ್ಳಿ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಪ್ರಕರಣ ಸಂಬಂಧ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ 10 ವರ್ಷಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಿ ತಯಾರಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಬಂಧಿಸಿದ ಠಾಣೆಗಳಿಗೆ ಸೂಚನೆ ನೀಡಿದ್ದಾರೆ.
ವರದಿ ಸಿದ್ಧತೆ: ಜಿಲ್ಲೆಯಲ್ಲಿ 10 ವರ್ಷದಿಂದ ಮಾದಕ ವಸ್ತು ಸಂಬಂಧ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖ ಲಾಗಿರುವ ಪ್ರಕರಣಗಳಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ರಚನೆ ಯಾಗಿದೆ. 10 ವರ್ಷದಿಂದ ಇದುವರೆಗೆ ಜಿಲ್ಲೆಯಲ್ಲಿ ಎಷ್ಟು ಪ್ರಕರಣ ದಾಖಲಾಗಿದೆ. ಎಷ್ಟು ಆರೋಪಿಗಳ ಬಂಧನವಾಗಿದೆ. ಎಷ್ಟು ಮಂದಿ ಜಾಮೀನಿನ ಮೇಲೆ ಹೊರಗಿದ್ದಾರೆ. ಎಷ್ಟು ಮಂದಿ ಪೊಲೀಸರ ಕಣ್ಣಳತೆಯಲ್ಲಿದ್ದಾರೆ. ಕ್ರಿಮಿನಲ್ ಚಟುವಟಿಕೆಯಿಂದ ದೂರ ಉಳಿದಿ ದ್ದಾರೆಯೇ ಮತ್ತೇ ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ಪ್ರಕರಣ ದಾಖಲಾಗಿದೆಯೇ ಮತ್ತಿತರ ವಿವರ ಕಲೆ ಹಾಕಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪರೇಡ್ ನಡೆಸಿ: ಡ್ರಕ್ಸ್ ಪ್ರಕರಣದಲ್ಲಿ ರಾಜ್ಯದ ಅನೇಕ ನಟ-ನಟಿಯರು, ಉದ್ದಿಮೆದಾರರು, ರಾಜ ಕಾರ ಣಿ ಗಳು, ಪ್ರಭಾವಿಗಳ ಹೆಸರು ಕೇಳಿ ಬರುತ್ತಿದೆ. ಜಿಲ್ಲೆಯಲ್ಲಿ ಬಹಳಷ್ಟು ಪ್ರಮುಖರ ಒಡೆತನದ ಫಾರಂ ಹೌಸ್, ರೆಸಾರ್ಟ್, ಬಾರ್, ಕ್ಲಬ್‌ಗಳಿರುವುದು ಕಂಡುಬಂದಿದ್ದು, ಜಿಲ್ಲಾ ಪೊಲೀಸರು ಮತ್ತಷ್ಟು ಎಚ್ಚರಗೊಂಡಿದ್ದಾರೆ. ಜಿಲ್ಲೆಯ 4 ತಾಲೂಕುಗಳಾದ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಪ್ರತಿದಿನ ಒಂದೊಂದು ತಾಲೂ ಕಿನ ಎಲ್ಲಾ ಠಾಣಾ ವ್ಯಾಪ್ತಿಯ ಮಾದಕ ವಸ್ತು ಪ್ರಕರಣದ ಆರೋಪಿಗಳ ಪರೇಡ್ ನಡೆಸಲು ಸುತ್ತೋಲೆ ಹೊರಡಿಸಿದ್ದಾರೆ.
ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಮದಡಿ ಎಲ್ಲರಿಗೂ ಪರೇಡ್ ನಡೆಸಬೇಕು. ಅಗತ್ಯ ಮಾಹಿತಿ ಸಂಗ್ರಹ ದೊಂದಿಗೆ ಖಡಕ್ ಎಚ್ಚರಿಕೆ ನೀಡುವಂತೆ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ ನೀಡಿದ್ದಾರೆ.
ಚೆಕ್‌ಪೋಸ್ಟ್ ನಿರ್ಮಿಸಿ ಕಾರ್ಯಾಚರಣೆ : ಯಾವುದೇ ಡೀಲರ್‌ಗಳು ಜಿಲ್ಲೆಯಲ್ಲಿ ವಾಸ್ತವ್ಯ ಹೂಡಲು ಬಿಡುವುದಿಲ್ಲ. ಈಗಾಗಲೇ ನಮ್ಮ ಪೊಲೀಸ್ ಸಿಬ್ಬಂದಿ ಹದ್ದಿನ ಕಣ್ಣಿಟ್ಟಿದ್ದಾರೆ. 10 ವರ್ಷದಿಂದ ಮಾದಕ ವಸ್ತುಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳ ಪಟ್ಟಿ ತಯಾರಾಗುತ್ತಿದ್ದು, ಪ್ರತಿಯೊಬ್ಬರಿಂದ ಮಾಹಿತಿ ಪಡೆದು, ತನಿಖೆಗೆ ವಿಶೇಷ ಕಾರ್ಯಾಚರಣೆ ರೂಪಿಸಲಾಗಿದೆ.
–ರವಿ.ಡಿ.ಚನ್ನಣ್ಣನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ