Advertisement

Assam; ಮಣಿಪುರದಿಂದ ಸಾಗಿಸಲಾಗುತ್ತಿದ್ದ 5 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ

04:04 PM Oct 29, 2023 | Team Udayavani |

ಕರ್ಬಿ ಅಂಗ್ಲಾಂಗ್ : ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಮಣಿಪುರದಿಂದ ಸಾಗಿಸುತ್ತಿದ್ದ 5 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಮತ್ತು ಓರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

Advertisement

ಖಚಿತ ಸುಳಿವಿನ ಮೇರೆಗೆ ಪೊಲೀಸರು ಶನಿವಾರ ರಾತ್ರಿ ಲಾಹೋರಿಜನ್ ಔಟ್‌ಪೋಸ್ಟ್ ಪ್ರದೇಶದಲ್ಲಿ ವಾಹನವನ್ನು ತಡೆದಿದ್ದಾರೆ. ವಾಹನದ ಸಂಪೂರ್ಣ ತಪಾಸಣೆಯ ನಂತರ, ಅಪಾರ ಪ್ರಮಾಣದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದು, ಮಣಿಪುರದಿಂದ ಬಂದ ಒಬ್ಬ ಪೆಡ್ಲರ್ ಅನ್ನು ಬಂಧಿಸಿದ್ದೇವೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಿಬ್ ಕುಮಾರ್ ಸೈಕಿಯಾ ಪಿಟಿಐಗೆ ತಿಳಿಸಿದ್ದಾರೆ.

ಪೊಲೀಸ್ ಕಾರ್ಯಾಚರಣೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ”ಪೊಲೀಸರು 637.28 ಗ್ರಾಂ. ಹೆರಾಯಿನ್ ಹೊಂದಿರುವ 50 ಸೋಪ್ ಬಾಕ್ಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)ಮಾನದಂಡಗಳ ಪ್ರಕಾರ ವಶಪಡಿಸಿಕೊಂಡ ಡ್ರಗ್ಸ್ ಒಟ್ಟು ಮೌಲ್ಯ ಸುಮಾರು 5.1 ಕೋಟಿ ರೂ. ಎಂದು ಅಸ್ಸಾಂ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next