ಪಣಜಿ: ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಗಗನಸಖಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಯಾಣಿಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಈ ಘಟನೆ ಸೆಪ್ಟೆಂಬರ್ 13 ರಂದು ನಡೆದಿದ್ದು, ವಿಮಾನವು ಬೆಂಗಳೂರಿನಿಂದ ಗೋವಾಗೆ ಹೊರಡುವ ಕೆಲ ನಿಮಿಷಗಳ ಮೊದಲು ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ನೀಡಿದ ಪೊಲೀಸರು 40 ವರ್ಷ ವಯಸ್ಸಿನ ಅನಿಲ್ ಕುಮಾರ್ ಎಂಬ ಪ್ರಯಾಣಿಕ ಕುಡಿದ ಮತ್ತಿನಲ್ಲಿ ವಿಮಾನದ ಸಿಬ್ಬಂದಿಯ ಕೈ ಹಿಡಿದು ವಿಮಾನದಲ್ಲಿದ್ದ ಇತರ ಪ್ರಯಾಣಿಕರಲ್ಲಿ ಆಕೆ ತನ್ನ ಆಪ್ತ ಸ್ನೇಹಿತೆ ಎಂದು ಹೇಳಿಕೊಂಡು ಅನುಚಿತವಾಗಿ ವರ್ತಿಸಿದ್ದು ಈ ಕುರಿತು ವಿಮಾನ ಸಿಬಂದಿ ದೂರು ನೀಡಿದ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದ ವೇಳೆ ಪ್ರಯಾಣಿಕ ಪಾನಮತ್ತನಾಗಿದ್ದ ಎನ್ನಲಾಗಿದೆ.
ಪ್ರಯಾಣಿಕನನ್ನು ವಶಕ್ಕೆ ಪಡೆದ ಪೊಲೀಸರು ವ್ಯಕ್ತಿ ಪಾನಮತ್ತನಾಗಿ ವಿಮಾನದ ಸಿಬಂದಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 354 (ಮಹಿಳೆಯೊಬ್ಬಳ ಮಾನಹಾನಿಯನ್ನು ಕೆರಳಿಸುವ ಉದ್ದೇಶದಿಂದ ಆಕೆಯ ಮೇಲೆ ಹಲ್ಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಸದ್ಯ ಬಂಧಿತ ವ್ಯಕ್ತಿಗೆ ಜಾಮೀನು ದೊರೆತಿದೆ.
ಇದನ್ನೂ ಓದಿ: Jhansi: ಕೋರ್ಟ್ ಗೆ ಕರೆದೊಯ್ಯುತ್ತಿರುವಾಗಲೇ 3 ಆರೋಪಿಗಳು ಪೊಲೀಸ್ ಕಸ್ಟಡಿಯಿಂದ ಪರಾರಿ!