ನವದೆಹಲಿ: ಇಂಡಿಗೋ ವಿಮಾನದಲ್ಲಿ ಮತ್ತೊಂದು ಅವ್ಯವಸ್ಥೆ ಪ್ರಕರಣ ಕಂಡುಬಂದಿದೆ. ಕುಡಿದ ಮತ್ತಿನಲ್ಲಿ ಪ್ರಯಾಣಿಕನೊಬ್ಬ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಘಟನೆ ನಡೆದಿದೆ.
ಶುಕ್ರವಾರ ಬೆಳಗ್ಗೆ 7.56ಕ್ಕೆ ದೆಹಲಿ ವಿಮಾನ ನಿಲ್ದಾಣದಿಂದ 6E 308 ಸಂಖ್ಯೆಯ ಇಂಡಿಗೋ ವಿಮಾನ ಬೆಂಗಳೂರಿನತ್ತ ಹೋಗುವ ಸಂದರ್ಭದಲ್ಲಿ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಹಾರಾಟದ ಮಧ್ಯೆಯೇ ವಿಮಾನದ ತುರ್ತು ಬಾಗಿಲು ತೆರೆಯಲು ಮುಂದಾಗಿದ್ದಾನೆ ಇದನ್ನು ಗಮನಿಸಿದ ಸಿಬ್ಬಂದಿ ತಕ್ಷಣವೇ ಆತನನ್ನು ತಡೆದಿದ್ದಾರೆ.ಆಗಬಹುದಾದ ಅವಾಂತರವನ್ನು ತಪ್ಪಿಸಿದ್ದಾರೆ.
ಬಳಿಕ ಸಿಬ್ಬಂದಿ ವಿಮಾನದ ಕ್ಯಾಪ್ಟನ್ ಗೆ ಮಾಹಿತಿ ನೀಡಲಾಯಿತು. ಪ್ರಯಾಣಿಕನಿಗೆ ಎಚ್ಚರಿಕೆ ನೀಡಲಾಯಿತು. ವಿಮಾನ ಮತ್ತು ಪ್ರಯಾಣಿಕರ ಸಂರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿದೆ.
ಇದನ್ನೂ ಓದಿ:IPL 2023: ಎರಡನ್ನೂ ಸೋತ ಸಂಕಟದಲ್ಲಿ ಡೆಲ್ಲಿ- ಇಂದು ರಾಜಸ್ಥಾನ್ ರಾಯಲ್ಸ್ ಎದುರಾಳಿ
ಸಹ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತಂದ ಆರೋಪ ಮೇಲೆ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.