Advertisement

Bus drivers: ಕುಡಿದು ಶಾಲಾ ವಾಹನ ಚಾಲನೆ: 16 ಚಾಲಕರ ವಿರುದ್ಧ ಪ್ರಕರಣ

12:17 PM Jan 24, 2024 | Team Udayavani |

ಬೆಂಗಳೂರು:  ಮದ್ಯಪಾನ ಮಾಡಿ ಶಾಲಾ ಮಕ್ಕಳ ವಾಹನ ಚಲಾಯಿಸುವ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಮಂಗಳವಾರ ಬೆಳಗ್ಗೆ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಈ ವೇಳೆ ಸಿಕ್ಕಿಬಿದ್ದ 16 ಚಾಲಕರ ವಿರುದ್ಧ ಕ್ರಿಮಿನಲ್‌ ಕೇಸು ದಾಖಲಿಸಿಕೊಂಡಿದ್ದಾರೆ.

Advertisement

ಬೆಳಗ್ಗೆ 7ರಿಂದ 9.30ರವರೆಗೆ 3,414 ಶಾಲಾ ವಾಹನಗಳ ಚಾಲಕರನ್ನು ಪೊಲೀಸರು ಪರಿಶೀಲಿಸಿದ್ದು, 16 ಚಾಲಕರು ಮದ್ಯಸೇವಿಸಿ ಶಾಲಾ ವಾಹನ ಚಾಲನೆ ಮಾಡಿರುವುದು ಬೆಳಕಿಗೆ ಬಂದಿದೆ. ಇವರ ವಿರುದ್ಧ ಸಂಚಾರ ಪೊಲೀಸರು ಕ್ರಿಮಿನಲ್‌ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಇನ್ನು ಸಿಕ್ಕಿಬಿದ್ದ 16 ಚಾಲಕರ ವಾಹನ ಪರವಾನಗಿ ಪತ್ರ ಆರ್‌ಟಿಒ ಕಚೇರಿಗೆ ರವಾನಿಸಲಾಗಿದೆ.

ಶಾಲಾ ಮಕ್ಕಳನ್ನು ಕರೆತರುವ ವಾಹನಗಳ ಚಾಲಕರು, ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆ ಪ್ರಮಾಣ ಪತ್ರ ಸಲ್ಲಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಈ ಹಿಂದೆ ಕಡ್ಡಾಯ ಮಾಡಿತ್ತು. ಇದರ ಬೆನ್ನಲ್ಲೇ ಶಾಲಾ ವಾಹನ ಚಾಲಕರ ವಿರುದ್ಧ ಸಂಚಾರ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ಕುರಿತು ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೋಲೀಸ್‌ ಆಯುಕ್ತ ಎಂ.ಎನ್‌.ಅನುಚೇತ್‌  ಮಾತನಾಡಿ, ಕಡಿದು ವಾಹನ ಚಲಾಯಿಸಿದ ಚಾಲಕರ ಚಾಲನ ಪರವಾನಗಿ ಅಮಾನತುಗೊಳಿಸುವಂತೆ ಆರ್‌ಟಿಒಗೆ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next