ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾರೆ. ನಾಪತ್ತೆಯಾಗಿದ್ದ ಬಾಲಕಿ: ಶಾಲೆಯಿಂದ ಬಂದು ಮನೆಗೆಲಸದಲ್ಲಿ ತೊಡಿಗಿಸಿಕೊಂಡಿದ್ದ ಬಾಲಕಿ ಸಂಜೆ 7 ಗಂಟೆ ನಂತರ ನಾಪತ್ತೆಯಾಗಿದ್ದಳು. ಇದರಿಂದ ಆತಂಕಗೊಂಡ ಬಾಲಕಿಯ ಪೋಷಕರು ಗ್ರಾಮದಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿ ಗ್ರಾಮದ ಹೊರ ವಲಯದಲ್ಲಿ ಗುರುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿರುವುದು ಕಂಡು ಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಪೋಷಕರು ಮಗುವನ್ನು ಗುರುತಿಸಿದ್ದಾರೆ. ಅತ್ಯಾಚಾರವೆಸಗಿ ಕೊಲೆ: ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಕೊಲೆಗೀಡಾದ ಬಾಲಕಿಯ ಪೋಷಕರೊಂದಿಗೆ ಮಾತುಕತೆ ನಡೆಸಿ ಸಂಶಯಾಸ್ಪದ ಹಿನ್ನೆಲೆಯಲ್ಲಿ ಅದೇ ಗ್ರಾಮದ ಆನಂದ್ ಎಂಬಾತನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದಾಗ ತಾನೇ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದಾಗಿ ಪ್ಪೊಪ್ಪಿಕೊಂಡಿದ್ದಾನೆಂದು ಪೊಲೀಸ್ ಮೂಲಗಳು ತಿಳಿಸಿವೆ. ಅತ್ಯಾಚಾರ ಪ್ರಕರಣ ತಿಳಿದ ಕೂಡಲೇ ಗ್ರಾಮಕ್ಕೆ ಚಿಂತಾಮಣಿ ತಾಲೂಕು ತಹಶೀಲ್ದಾರ್ ಎಂ.ಗಂಗಪ್ಪ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್ ಸಮ್ಮುಖದಲ್ಲಿ ಬಾಲಕಿಯರ ಮರಣೋತ್ತರ ಪರೀಕ್ಷೆಯನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸಲಾಯಿತು. ಘಟನೆಯ ಕುರಿತು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಐಜಿಪಿ, ಎಸ್ಪಿ ಭೇಟಿ: 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆ ಘಟನಾ ಸ್ಥಳಕ್ಕೆ ಕೇಂದ್ರ ವಲಯದ ಐಜಿಪಿ ಅಮೃತ್ ಪಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕರೆಡ್ಡಿ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. ಘಟನೆಯ ಸಂಬಂದ ಆರೋಪಿ ವಿರುದ್ಧª ಕ್ರಮ ಕೈಗೊಳ್ಳುವಂತೆ ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಜಿ.ಕೃಷ್ಣಮೂರ್ತಿ, ಚಿಂತಾಮಣಿ ಗ್ರಾಮಾಂತರ ಠಾಣೆ ಆರಕ್ಷಕ ವೃತ್ತ ನಿರೀಕ್ಷಕ ಆನಂದ್ ಕುಮಾರ್‌ಗೆ ಸೂಚಿಸಿದರು. ಕುಡಿದ ಅಮಲಿನಲ್ಲಿ ಕೃತ್ಯ: ಜಿಲ್ಲೆಯ ಚಿಂತಾಮಣಿ ತಾಲೂಕಿನ ದ್ವಾರಪಲ್ಲಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂದಿಸಿದ್ದಂತೆ ಈಗಾಗಲೇ ಅದೇ ಗ್ರಾಮದ ಆರೋಪಿ ಆನಂದ್ (26) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಕುಡಿದ ಅಮಲಿನಲ್ಲಿ ಈ ಕೃತ್ಯವೆಸಗಿದ್ದಾನೆ. ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾನೆ ಎಂದು ಕೇಂದ್ರ ವಲಯದ ಐಜಿಪಿ ಅಮೃತ್‌ಪಾಲ್ ತಿಳಿಸಿದ್ದಾರೆ.
Advertisement