Advertisement

ರಾಮ ಮಂದಿರ ಭೂಮಿ ಪೂಜೆ: ಉಡುಪಿ ಜಿಲ್ಲೆಯಲ್ಲಿ ಸೆಕ್ಷನ್ 144, ಮದ್ಯ ಮಾರಾಟಕ್ಕಿಲ್ಲ ಅನುಮತಿ

05:32 PM Aug 04, 2020 | keerthan |

ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಬುಧವಾರ ನಡೆಯಲಿರುವ ಕಾರಣ ಉಡುಪಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜಿಲ್ಲೆಯಲ್ಲಿ ಬುಧವಾರ ಮದ್ಯಮುಕ್ತ ದಿನ ಆಚರಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದರು.

Advertisement

ಮಂಗಳವಾರ ರಾತ್ರಿ 8 ಗಂಟೆಯಿಂದ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯಲ್ಲಿ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್, ವೈನ್ ಶಾಪ್ ಗಳ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

1)ಜಿಲ್ಲೆಯಲ್ಲಿ ಈ ಸಮಯದಲ್ಲಿ ಸೆ.144 ಜಾರಿಯಲ್ಲಿದ್ದು, ಈ ಸಮಯದಲ್ಲಿ ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು. ಬಂದೂಕುಗಳು, ಚಾಕುಗಳು, ಕೋಲುಗಳ ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

2)  ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

3) ಯಾವುದೇ ರೀತಿಯ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ/ ರ‍್ಯಾಲಿ, ಸಾರ್ವಜನಿಕ/ರಾಜಕೀಯ ಸಭೆ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.

Advertisement

4)   ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುನ್ನು ನಿಷೇಧಿಸಲಾಗಿದೆ.

5)  ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ.

6)ಸಾರ್ವಜನಿಕ ಸ್ಥಳದಲ್ಲಿ ಎಲ್.ಇ.ಡಿ ಬಳಸಿ ಪ್ರದರ್ಶನ ನಡೆಸುವುದನ್ನು ನಿಷೇಧಿಸಲಾಗಿದೆ.

7)  ಸಾರ್ವಜನಿಕ ಸ್ಥಳದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ.

8) ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಾಧೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸಬಹುದಾದದ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದದ ಬಹಿರಂಗ ಘೋಷಣೆಗಳನ್ನು ಮಾಡುವುದು ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶಭರಿತ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಪ್ರಯೊಗ ಮಾಡುವುದು, ಮತ್ತು ಚಿತ್ರಗಳನ್ನು , ಸಂಕೇಗಳನ್ನು ಭಿತ್ತಿ ಪತ್ರಗಳನ್ನು ಆಥವಾ ಇತರೆ ಯಾವುದೇ ವಸ್ತು ಅಥವಾ ಪದಾರ್ಥಗಳನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ.

9) ಉಡುಪಿ ಜಿಲ್ಲಾ  ವ್ಯಾಪ್ತಿಯಲ್ಲಿ ಬರುವ ಪಟಾಕಿ ಮಾರಾಟ ಮಾಡುವ ಪರವಾನಿಗೆದಾರರು ಅಂಗಡಿಗಳನ್ನು ಮುಚ್ಚುವುದು ಮತ್ತು ಪಟಾಕಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next