Advertisement

ಶಿಕ್ಷಕರ ನೇಮಕಕ್ಕೆ ಡಿಎಸ್‍ಎಸ್‌ಆಗ್ರಹ

05:44 PM Mar 31, 2022 | Shwetha M |

ಸಿಂದಗಿ: ದೇವರಹಿಪ್ಪರಗಿ ತಾಲೂಕಿನ ಚಟ್ನಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶೀಘ್ರದಲ್ಲಿ ಶಿಕ್ಷಕರನ್ನು ನೇಮಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ದೇವರಹಿಪ್ಪರಗಿ ತಾಲೂಕು ಸಮಿತಿ ವತಿಯಿಂದ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವ್ಯವಸ್ಥಾಪಕ ಎಸ್‌.ಎ. ಬಂದೆ ಅವರಿಗೆ ಮನವಿ ಸಲ್ಲಿಸಿದರು.

Advertisement

ದೇವರಹಿಪ್ಪರಗಿ ತಾಲೂಕಿನ ಚಟ್ನಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 7ನೇ ತರಗತಿಯಲ್ಲಿ 130ಕ್ಕೂ ಹೆಚ್ಚು ಚ್ಚ ವಿದ್ಯಾರ್ಥಿಗಳು ವ್ಯಾಸಂಗಮಾಡುತ್ತಿದ್ದಾರೆ. ಆದರೆ ಈ ಶಾಲೆಯಲ್ಲಿ ಒಬ್ಬ ಮೂಕ್ಯಗುರು ಮತ್ತು ಇಬ್ಬರು ಸಹಶಿಕ್ಷರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಇಂಗ್ಲಿಷ್‌, ಗಣಿತ ಮತ್ತು ವಿಜ್ಞಾನ ವಿಷಯ ಬೋಧನೆ ಮಾಡುವ ಶಿಕ್ಷಕರ ಕೊರತೆಯಿದೆ. ಆದ್ದರಿಂದ ಇಂಗ್ಲೀಷ್‌, ಗಣಿತ ಮತ್ತು ವಿಜ್ಞಾನ ವಿಷಯ ಬೋಧನೆ ಮಾಡುವ ಶಿಕ್ಷಕರನ್ನು ನೇಮಕ ಮಾಡಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ರಾಕೇಶ ಕಾಂಬಳೆ, ದೇವರಹಿಪ್ಪರಗಿ ತಾಲೂಕಾ ಅಧ್ಯಕ್ಷ ರಮೇಶ ಚಲವಾದಿ, ಸಿಂದಗಿ ತಾಲೂಕಾ ಅಧ್ಯಕ್ಷ ಉಮೇಶ ದೊಡಮನಿ, ಮೌನೇಶ ಚಲವಾದಿ, ರಮೇಶ ದೊಡಮನಿ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next