ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಬೇಕಿದ್ದ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಬಂದಿರುವುದಾಗಿ ವರದಿಯಾಗಿದೆ.
ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿರುವ ಇ ಮೇಲ್ ನಲ್ಲಿ ದೆಹಲಿಯಿಂದ ದುಬೈ ಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಭದ್ರತಾ ಸಿಬಂದಿಗಳು ಅಲರ್ಟ್ ಆಗಿ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ ಪರಿಶೀಲನೆ ನಡೆಸಿದ್ದಾರೆ ಆದರೆ ಈ ವೇಳೆ ವಿಮಾನದಲ್ಲಿ ಯಾವುದೇ ಸ್ಪೋಟಕ ಸಾಧನಗಳು ಅಥವಾ ವಸ್ತುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ.
ಇತ್ತೀಚಿನ ದಿನಗಳಲ್ಲಿ ವಿಮಾನ, ಆಸ್ಪತ್ರೆ, ಶಾಲಾ ಕಾಲೇಜು ಸೇರಿದಂತೆ ಹಲವಾರು ಕಡೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆಯ ಇ ಮೇಲ್ ಬರುತ್ತಿದ್ದು ಇದುವರೆಗೂ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಬದಲಾಗಿ ಹುಸಿ ಬಾಂಬ್ ಬೆದರಿಕೆ ಎನ್ನಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ದೆಹಲಿಯಲ್ಲಿ ಹಾರಾಟ ನಡೆಸುವ ವಿಮಾನಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಕೆಲವೊಂದು ವಿಮಾನಗಳ ಹಾರಾಟದ ಸಮಯದಲ್ಲಿ ವ್ಯತ್ಯಯ ಉಂಟಾಗಿತ್ತು ಎಂದು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Pakistan ಜನರು ಕಂಗಾಲು-ಒಂದು ಕೆಜಿ ಟೊಮೆಟೋ ಬೆಲೆ 200, ಲಿಂಬೆಹಣ್ಣು ಕೆಜಿಗೆ 480 ರೂ.!