Advertisement
ಸಾವಿರಾರು ಪ್ರಯಾಣಿಕರು ಭೇಟಿ: ರಾಜ್ಯ ಹೆದ್ದಾರಿಯಾದ ಈ ರಸ್ತೆ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೊಳಪಡುತ್ತದೆ. ಕೊಳ್ಳೇಗಾಲದಿಂದ ಕೌದಳ್ಳಿತನಕ ಕೊಳ್ಳೇಗಾಲ ಉಪ ವಿಭಾಗಕ್ಕೆ, ಕೌದಳ್ಳಿಯಿಂದ ಪಾಲರ್ ತನಕ ಮಲೆ ಮಹದೇಶ್ವರ ಉಪ ವಿಭಾಗಕ್ಕೆ ಸೇರಿದೆ. ರಾಜ್ಯದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲೊಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು ಭೇಟಿ ನೀಡುತ್ತಾರೆ. ಹಾಗಾಗಿ ಈ ರಸ್ತೆಯಲ್ಲಿ ಪ್ರತಿ ದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ.
Related Articles
Advertisement
ರಸ್ತೆ ಅಭಿವೃದ್ಧಿಪಡಿಸಲು ಆಗ್ರಹ: ತಾಳ ಬೆಟ್ಟದಿಂದ ಮಹದೇಶ್ವರ ಬೆಟ್ಟದವರಗೆ ಎಲ್ಲಿ ಯಾವಾಗ ಏನಾಗುತ್ತದೆ ಎಂಬುದೆ ಗೊತ್ತಾಗುವುದಿಲ್ಲ, ಮೃತ್ಯು ಕೂಪವಾಗಿರವ ಈ ರಸ್ತೆಯನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿ ಯಾತ್ರಿಕರು ನೆಮ್ಮದಿಯಿಂದ ಹೋಗಿ ಬರಲು ಅನುವು ಮಾಡಬೇಕು ಎಂದು ಭಕ್ತರು ಆಗ್ರಹಿಸಿದ್ದಾರೆ. ಈ ರಸ್ತೆಯನ್ನು ಕೆಶಿಪ್‌ಗೆ ಸೇರಿಸಲಾಗಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಲಿದೆ ಎಂದು ವರ್ಷಗಳಿಂದ ಹೇಳುತ್ತಲೇ ಬರಲಾಗಿದೆ. ಆದರೆ, ಅಭಿವೃದ್ಧ ಕಾಮಗಾರಿ ಮಾತ್ರ ಇನ್ನೂ ಆರಂಭವಾಗಿಲ್ಲ ಎಂಬ ದೂರು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ಸೌಲಭ್ಯವಿದ್ದರೂ ಸಮರ್ಪಕ ರಸ್ತೆ ಇಲ್ಲ: ರಾಜ್ಯದ ಪ್ರಸಿದ್ಧ ಯಾತ್ರಸ್ಥಳ ಹಾಗೂ ಹೆಚ್ಚು ಆದಾಯ ಹೊಂದಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ರಸ್ತೆ ಹೀಗಾಗಿರುವುದು ಪ್ರಯಾಣಿಕರಲ್ಲಿ ಬೇಸರ ಮೂಡಿಸುತ್ತದೆ. ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿಗೊಳ್ಳುತ್ತಿದ್ದಂತೆ ಯಾತ್ರಿಕರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹಾಗೆಯೇ ಪ್ರತಿ ತಿಂಗಳು ಹುಂಡಿಯ ಆದಾಯ ಹೆಚ್ಚುತ್ತಲೇ ಇದೆ. ಬೆಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ. ಯಾತ್ರೆಗೆ ಬರುವ ಜನರಿಗೆ ಹೆಚ್ಚಿನ ಅನುಕೂಲಗಳನ್ನು ಮಾಡಿಕೊಡಲಾಗುತ್ತಿದೆ. ಮೂಲ ಸೌಕರ್ಯಗಳು ಸಮರ್ಪಕವಾಗಿದೆ. ಭಕ್ತರಿಗೆ ನಿರಂತರ ದಾಸೋಹ ವ್ಯವಸ್ಥೆ ಸೇರಿದಂತೆ ಇತರೆ ಅನುಕೂಲಗಳನ್ನು ಮಾಡಿಕೊಡಲಾಗುತ್ತಿದೆ. ಆದರೆ, ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೇ ಚೆನ್ನಾಗಿಲ್ಲದಂತಹ ಪರಿಸ್ಥಿತಿ ತಲೆದೋರಿದೆ.
ಮಲೆ ಮಹದೇಶ್ವರ ಬೆಟ್ಟ ನಮ್ಮ ಜಿಲ್ಲೆಯ ಹೆಮ್ಮೆಯ ಪುಣ್ಯ ಕ್ಷೇತ್ರ. ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಇಲ್ಲಿಗೆ ನಿತ್ಯ ಸಾವಿರಾರು ಪ್ರಯಾಣಿಕರು ಬರುತ್ತಾರೆ. ಆದರೆ, ಇಲ್ಲಿನ ರಸ್ತೆ ತೀರಾ ಹದಗೆಟ್ಟಿದ್ದು, ಪ್ರಯಾಸ ಪಡುವಂತಾಗಿದೆ. ಇದರಿಂದ ಪ್ರಯಾಣದ ಅವಧಿ ಸಹ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಈ ರಸ್ತೆ ಅಭಿವೃದ್ಧಿಪಡಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು.-ಸಿದ್ದಲಿಂಗಸ್ವಾಮಿ, ಭಕ್ತ, ರಾಮಸಮುದ್ರ ಸಿದ್ದರಾಮಯ್ಯ ಸರ್ಕಾರದಲ್ಲಿ ಎಚ್.ಸಿ.ಮಹದೇವಪ್ಪ ಅವರು ಲೋಕೋಪಯೋಗಿ ಸಚಿವರಾಗಿದ್ದಾಗ ಕೊಳ್ಳೇಗಾಲದಿಂದ ಹನೂರುವರೆಗಿನ 24 ಕಿ.ಮೀ. ರಸ್ತೆಯನ್ನು ಕೆ ಶಿಪ್‌ಗೆ ಸೇರಿಸಲಾಗಿದೆ. ಈ ರಸ್ತೆ ಅಭಿವೃದ್ಧಿಗೆ ಆ ಸಂದರ್ಭದಲ್ಲಿ 108 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಟೆಂಡರ್ ಕೂಡ ಮುಗಿದಿದ್ದು, ಇನ್ನೊಂದು ತಿಂಗಳಲ್ಲಿ ರಸ್ತೆ ಕಾಮಗಾರಿ ಆರಂಭವಾಗಲಿದೆ. ಹನೂರಿನಿಂದ ಮಲೆ ಮಹದೇಶ್ವರಬೆಟ್ಟ, ಮೆಟ್ಟೂರು ವರೆಗಿನ ರಸ್ತೆಯನ್ನು ರಾಷ್ಟ್ರಿಯ ಹೆದ್ದಾರಿಗೆ ಸೇರಿಸಬೇಕೆಂದು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ.
-ಆರ್. ನರೇಂದ್ರ, ಶಾಸಕ, ಹನೂರು * ಕೆ.ಎಸ್. ಬನಶಂಕರ ಆರಾಧ್ಯ