Advertisement

Dudhsagar Falls: ನಿರ್ಬಂಧ ತೆರವು… ದೂದ್ ಸಾಗರ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ

05:01 PM Oct 12, 2023 | sudhir |

ಪಣಜಿ: ಗೋವಾದ ಜಗತ್ಪ್ರಸಿದ್ಧ ದೂದ್ ಸಾಗರ್ ಜಲಪಾತವು ರಾಜ್ಯದಲ್ಲಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಜಲಪಾತಗಳಲ್ಲಿ ಒಂದಾಗಿದೆ. ಈ ಜಲಪಾತ ವೀಕ್ಷಣೆಗೆ ಮಳೆಗಾಲದಲ್ಲಿ ಹೇರಿದ್ದ ನಿರ್ಬಂಧ ತೆರವುಗೊಳಿಸಲಾಗಿದ್ದು, ಪ್ರವಾಸಿಗರು ದೂದ್ ಸಾಗರ ಜಲಪಾತ ವೀಕ್ಷಣೆಗೆ ಅವಕಾಶ ಲಭಿಸಿದಂತಾಗಿದೆ.

Advertisement

ಮಳೆಗಾಲದ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಗೋವಾ ಜಿಲ್ಲಾಧಿಕಾರಿಗಳು ದೂಧಸಾಗರ ಜಲಪಾತ ವೀಕ್ಷಣೆಗೆ ಪ್ರವಾಸಿಗರು ಭೇಟಿ ನೀಡುವುದನ್ನು ನಿಷೇಧಿಸಿದ್ದರು. ಪ್ರವಾಸಿಗರಿಗೆ ಮಾಹಿತಿ ನೀಡಲು ಸುತ್ತೋಲೆ ಹೊರಡಿಸಲಾಗಿತ್ತು. ಕೆಲ ತಿಂಗಳ ನಿರ್ಬಂಧದ ನಂತರ ಇದೀಗ ದೂಧಸಾಗರ ಪ್ರವಾಸೋದ್ಯಮ ಪುನರಾರಂಭಗೊಂಡಿದೆ.

ಮಳೆಗಾಲದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತಗಳಿಗೆ ಭೇಟಿ ನೀಡುತ್ತಾರೆ. ಈ ವರ್ಷ ಗೋವಾದಲ್ಲಿ ವಿವಿಧ ಜಲಪಾತಗಳಲ್ಲಿ ಸಂಭವಿಸಿದ ವಿವಿಧ ಅಪಘಾತಗಳಲ್ಲಿ ಹಲವಾರು ಪ್ರವಾಸಿಗರು ಮತ್ತು ಸ್ಥಳೀಯರು ಪ್ರಾಣ ಕಳೆದುಕೊಂಡ ನಂತರ ರಾಜ್ಯದ ಅರಣ್ಯ ಪ್ರದೇಶದಲ್ಲಿನ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು. ಜಗತ್ಪ್ರಸಿದ್ಧ ದೂಧಸಾಗರ ಜಲಪಾತ ಕೂಡ ಪ್ರವಾಸಿಗರಿಗೆ ಬಂದ್ ಆಗಿತ್ತು. ಮೂರು ತಿಂಗಳ ಕಾಯುವಿಕೆಯ ನಂತರ ಇದೀಗ ದೂದ್ ಸಾಗರ್ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Israel War: ಇಸ್ರೇಲ್‌ ಪ್ರತೀಕಾರದ ವೈಮಾನಿಕ ದಾಳಿಗೆ ಹಮಾಸ್‌ ಕಮಾಂಡರ್‌ ಅಬ್ದುಲ್‌ ಮೃತ್ಯು

Advertisement

Udayavani is now on Telegram. Click here to join our channel and stay updated with the latest news.

Next