Advertisement

ಬೇಸಿಗೆಯಲ್ಲೂ ದುಡಿಯೋಣ ಬಾ ಅಭಿಯಾನ

11:37 AM Mar 16, 2021 | Team Udayavani |

ಚಾಮರಾಜನಗರ: ಮಹಾತ್ಮಗಾಂಧಿ ರಾಷ್ಟ್ರೀಯಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ಬೇಸಿಗೆ ಅವಧಿಯಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ನಿರಂತರವಾಗಿ ಉದ್ಯೋಗ ಒದಗಿ ಸುವ ಉದ್ದೇಶದಿಂದ ಮುಂದಿನ 3 ತಿಂಗಳವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ “ದುಡಿ ಯೋಣ ಬಾ’ ಅಭಿಯಾನ ಹಮ್ಮಿಕೊಳ್ಳಲಾಗಿದೆ.

Advertisement

ಗ್ರಾಮೀಣ ಪ್ರದೇಶದ ಅನೇಕ ಕುಟುಂಬಗಳು ಜೀವನ ನಿರ್ವಹಣೆ ಪ್ರವೃತ್ತಿಯನ್ನು ಅವಲಂಬಿಸಿವೆ. ಈ ಪ್ರವೃತ್ತಿಯನ್ನು ತಡೆಯಲು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜನರಿಗೆ ಸ್ಥಳೀಯವಾಗಿ ಉದ್ಯೋಗ ನೀಡಲಾಗುತ್ತಿದೆ. ಬೇಸಿಗೆ ಅವಧಿಯಲ್ಲೂ ಗ್ರಾಮೀಣ ಜನರಿಗೆ ಉದ್ಯೋಗ ಸಮಸ್ಯೆ ಬಾರದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಅವಕಾಶ ಒದಗಿಸುವ ಸಲುವಾಗಿ ವಿಶೇಷವಾಗಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಮಾ.15ರಿಂದ ಮುಂದಿನ 3 ತಿಂಗಳವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ “ದುಡಿಯೋಣ ಬಾ’ ಅಭಿಯಾನ ನಡೆಸಲಾಗುತ್ತಿದೆ.

ಬೇಸಿಗೆ ಅವಧಿಯಲ್ಲಿ ನಿರಂತರವಾಗಿ ಕೆಲಸ ಒದಗಿಸುವುದು, ಯೋಜನೆಯಿಂದ ಹೊರಗುಳಿದ ದುರ್ಬಲ ಕುಟುಂಬಗಳನ್ನು ಸಕ್ರಿಯವಾಗಿ ಪಾಲ್ಗೊಳ್ಳು ವಂತೆ ಮಾಡುವುದು, ಗ್ರಾಮೀಣ ಸ್ಥಳೀಯರಿಗೆಉದ್ಯೋಗ ನೀಡುವ ಮೂಲಕ ಸ್ವಾವಲಂಬಿ ಬದುಕುಸಾಗಿಸುವಂತೆ ಮಾಡುವುದು, ಕೆಲಸ ಕಾಮಗಾರಿ ಬೇಡಿಕೆ ಸಲ್ಲಿಸುವ ವಿಧಾನವನ್ನು ಸರಳಗೊಳಿಸುವುದು ಅಭಿಯಾನದ ಉದ್ದೇಶವಾಗಿದೆ.

ಉದ್ಯೋಗ ಚೀಟಿ: ಮಾ.15ರಿಂದ 22ರವರೆಗೆ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಅಭಿಯಾನ ಕುರಿತು ಜನ ಜಾಗೃತಿ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ. ಉದ್ಯೋಗ ಚೀಟಿ ಹೊಂದಿಲ್ಲದೆಇರುವ ಕುಟುಂಬಗಳಿಂದ ಉದ್ಯೋಗ ಚೀಟಿಗಾಗಿ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಪಡೆಯಬೇಕು. ಜನ ಜಾಗೃತಿ ಕಾರ್ಯಕ್ರಮದ ಸಂದರ್ಭದಲ್ಲಿ ನೋಂದಾಯಿತ ಕೂಲಿ ಕಾರ್ಮಿಕರಿಂದ ಒಂದೇಬಾರಿಗೆ ಮೂರು ತಿಂಗಳ ಕೆಲಸದ ಬೇಡಿಕೆ ಪಡೆಯ ಬೇಕು ಎಂದು ಸೂಚಿಸಲಾಗಿದೆ.

ಮಾ.23ರಿಂದ 31ರವರೆಗೆ ಉದ್ಯೋಗ ಚೀಟಿಗಾಗಿ ಅರ್ಜಿ ಸಲ್ಲಿಸಿದ ಎಲ್ಲಾ ಕುಟುಂಬಗಳಿಗೆ ಉದ್ಯೋಗಚೀಟಿ ವಿತರಿಸಬೇಕು. ಕೆಲಸ ಒದಗಿಸಲು ಕಾಮಗಾರಿಗಳ ಅಂದಾಜು ಪಟ್ಟಿ ತಯಾರಿಕೆ, ತಾಂತ್ರಿಕ ಮತ್ತುಆಡಳಿತ ಮಂಜೂರಾತಿ, ಸಾರ್ವಜನಿಕ ಮಾಹಿತಿ ಫ‌ಲಕಅಳವಡಿಕೆ, ಜಿಯೋ ಟ್ಯಾಗ್‌ ಇತ್ಯಾದಿ ಪೂರ್ವ ಸಿದ್ಧತೆಮಾಡಿಕೊಳ್ಳಬೇಕು, ವ್ಯವಸ್ಥಿತವಾಗಿ ಕೂಲಿಕಾರರಗುಂಪು ಗಳನ್ನು ರಚಿಸಿ ಮೇಟ್‌ಗಳನ್ನು ಗುರುತಿಸಿ ತರಬೇತಿ ನೀಡಬೇಕು.

Advertisement

2 ದಿನದಲ್ಲಿ ಕೆಲಸ: ಏ.1ರಿಂದ ಜೂ.15ರವರೆಗೆ ಪ್ರತಿ ಸೋಮವಾರ ಕೆಲಸದ ಬೇಡಿಕೆ ಸಲ್ಲಿಸಿದ ವಿವರಗಳನ್ನುದಾಖಲಿಸಿ 2 ದಿನಗಳೊಳಗೆ ಕೆಲಸ ಒದಗಿಸಬೇಕು.ಕೆಲಸದ ಸ್ಥಳದಲ್ಲಿ ಕುಡಿಯುವ ನೀರು, ನೆರಳು, ಶಿಶುಪಾಲನೆಯಂತಹ ಸೌಲಭ್ಯ ಕಲ್ಪಿಬೇಕು, ಕೂಲಿಕಾರರಿಗೆನಿರಂತರವಾಗಿ ಉದ್ಯೋಗ ಒದಗಿಸಬೇಕು ಎಂದುತಿಳಿಸಲಾಗಿದೆ. ಅಭಿಯಾನದ ಸುಗಮ ನಿರ್ವಹಣೆಹಾಗೂ ಪ್ರಗತಿ ಗಾಗಿ ಜಿಲ್ಲಾ, ತಾಲೂಕು ಹಾಗೂಗ್ರಾಮ ಪಂಚಾಯಿತಿ ಮಟ್ಟದ ಉಸ್ತುವಾರಿ ಸಮಿತಿರಚಿಸಿ ಸೂಕ್ತ ಜವಾಬ್ದಾರಿ ಗಳನ್ನು ನಿಗದಿಪಡಿಸಲಾಗಿದೆ.

ರಾಯಭಾರಿ: ದುಡಿಯೋಣ ಅಭಿಯಾನದ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ದೀರ್ಘ‌ಕಾಲ ಮೇಟ್‌ ಆಗಿ ಕಾರ್ಯನಿರ್ವಹಿಸಿ ಅನುಭವ ಹೊಂದಿ ರುವ ಹಾಗೂ ನಾಯಕತ್ವ ಗುಣಗಳನ್ನು ಹೊಂದಿರುವಒಬ್ಬರನ್ನು ಅಭಿಯಾನದ ಅವಧಿಗೆ ರಾಯಭಾರಿಯಾಗಿನೇಮಿಸಿಕೊಳ್ಳಲು ಸಹ ತಿಳಿಸಲಾಗಿದೆ. ಒಟ್ಟಾರೆ ದುಡಿಯೋಣ ಬಾ ಅಭಿಯಾನ ಯಶಸ್ವಿಯಾಗಿಸಲು ಎಲ್ಲ ಸಿದ್ಧತೆ ನಡೆದಿದೆ.

ನರೇಗಾದಡಿ ಯಾವ್ಯಾವ ಕಾಮಗಾರಿಗೆ ಅವಕಾಶ :

ಬೇಸಿಗೆಯು ಮೂರು ತಿಂಗಳ ಅಭಿಯಾನದ ಅವಧಿಯಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಬದು, ಕೃಷಿ ಹೊಂಡ, ತೆರೆದ ಬಾವಿ, ಸೋಕ್‌ ಪಿಟ್‌ನಿರ್ಮಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ.ಸಮಗ್ರ ಕೆರೆ ಅಭಿವೃದ್ದಿ ಕಾರ್ಯಕ್ರಮದಡಿಕಾಲುವೆಗಳ ಪುನಶ್ಚೇತನ, ಕೆರೆಗಳ ಹೂಳುತೆಗೆಯುವುದು, ಕೆರೆ ಏರಿ ಮತ್ತು ಕೋಡಿ ದುರಸ್ತಿ,ಕೆರೆ ಅಂಚಿನಲ್ಲಿ ಅರಣ್ಯೀಕರಣ ಕಾಮಗಾರಿ ಕೈಗೊಳ್ಳಲು ಆದ್ಯತೆ ನೀಡಲಾಗಿದೆ. ರಸ್ತೆಬದಿನೆಡುತೋಪು, ಬ್ಲಾಕ್‌ ಪ್ಲಾಂಟೇಶನ್‌, ಕೃಷಿಅರಣ್ಯೀಕರಣ, ತೋಟಗಾರಿಕೆ ಬೆಳೆ ಬೆಳೆಯಲುಗುಂಡಿ ತೆಗೆಯುವುದು, ಬೋರ್‌ವೆಲ್‌ ರೀಚಾರ್ಜ್‌ ಕಾಮಗಾರಿ ನಿರ್ವಹಿಸಲು ಅವಕಾಶ ಮಾಡಿಕೊಡಲಾಗಿದೆ.

60 ದಿನದಲ್ಲಿ 17 ಸಾವಿರ ರೂ. ಪಡೆಯಬಹುದು :

ಉದ್ಯೋಗ ಖಾತರಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ 100 ದಿನಗಳ ಉದ್ಯೋಗ ಪಡೆಯಲು ಅವಕಾಶವಿದ್ದು ಬೇಸಿಗೆ ಅವಧಿಯಲ್ಲಿ 60 ದಿನಗಳು ಕೆಲಸ ನಿರ್ವಹಿಸಿದಲ್ಲಿ 16,500 ರೂ.ಪಡೆಯಬಹುದಾಗಿದೆ. ಆದ್ದರಿಂದ ಗ್ರಾಮೀಣ ಪ್ರದೇಶದ ಜನರು ದುಡಿಯೋಣ ಬಾ ಅಭಿಮಾನದ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಹರ್ಷಲ್‌ ಬೋಯರ್‌ ತಿಳಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next