Advertisement
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಮಾ.15 ರಿಂದ ಜೂ.30 ರವರೆಗೆ ದುಡಿಯೋಣ ಬಾ ಅಭಿಯಾನದಲ್ಲಿ ಭಾಗವಹಿಸಿ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಗ್ರಾಮೀಣ ಜನರಿಗೆ ಈ ಅವದಿಯಲ್ಲಿ ನಿರಂತರವಾಗಿ ಕೆಲಸ ಒದಗಿಸುವುದು, ಯೋಜನೆಯಿಂದ ಹೊರಗುಳಿದ ಆರ್ಥಿಕ ದುರ್ಬಲ ಕುಟುಂಬಗಳನ್ನು ಸಕ್ರಿಯವಾಗಿ ಭಾಗವಹಿಸುವಂತೆ ಮಾಡುವುದು, ಸ್ಥಳೀಯವಾಗಿ ಉದ್ಯೋಗ ನೀಡಿ ಸ್ವಾವಲಂಬಿಗಳಾಗುವಂತೆ ಮಾಡುವುದು ಈ ಅಭಿಯಾನದ ಮುಖ್ಯ ಉದ್ದೇಶ ಎಂದು ಪ್ರಿಯಾಂಕಾ ಹೇಳಿದ್ದಾರೆ.
Related Articles
Advertisement
ನೀರನ್ನು ಭೂಮಿಯಲ್ಲಿ ಇಂಗಿಸಿ ಅಂತರ್ಜಲ ಮಟ್ಟ ಹೆಚ್ಚಿಸಲು ಜಿಲ್ಲೆಯಲ್ಲಿ 16028 ಬಚ್ಚಲು ಗುಂಡಿಗಳನ್ನು ನಿರ್ಮಿಸಲಾಗಿದೆ. ಕಳೆದ ವರ್ಷ ಯೋಜನೆಯಡಿ ವಿಶೇಷ ಒತ್ತು ನೀಡಿ, ಗ್ರಾಮೀಣ ಭಾಗದ ಸರಕಾರಿ ಶಾಲಾ ಮಕ್ಕಳಿಗೆ ಹೊಸ ಅವಕಾಶ ನೀಡುವ ಉದ್ದೇಶದಿಂದ ಸುಸಜ್ಜಿತ ಶೌಚಾಲಯ, ವಿನೂತನ ಬಾಸ್ಕೆಟ್‌ಬಾಲ್ ಆಟದ ಅಂಕಣ, ಕಾಂಪೌಂಡ್, ಮಳೆ ನೀರು ಕೊಯ್ಲು, ಆಟದ ಮೈದಾನ ನಿರ್ಮಿಸಲಾಗಿದೆ.
ಅಂಗನವಾಡಿ ಕಟ್ಟಡ, ಘನತ್ಯಾಜ್ಯ ವಿಲೇವಾರಿ ಘಟಕ, ಕಾಲುಸಂಕ, ಸಂಪರ್ಕ ರಸ್ತೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಕೋ ಪಾರ್ಕ್ ನಿರ್ಮಾಣ, ಭೂ ಅಭಿವೃದ್ಧಿ ಕಾಮಗಾರಿ, ತೋಟಗಾರಿಕಾ ಬೆಳೆ, ಅರಣ್ಯ ಇಂಗುಗುಂಡಿ, ಹೊಸ ಕೆರೆ ನಿರ್ಮಾಣ, ಕೃಷಿ ಹೊಂಡ ಸೇರಿದಂತೆ ಅನೇಕ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಪ್ರಿಯಾಂಕಾ ವಿವರಿಸಿದರು.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ 2021-22 ನೇ ಆರ್ಥಿಕ ವರ್ಷದಲ್ಲಿ ಗುರಿ ಮೀರಿ ಸಾಧನೆ ಮಾಡಲಾಗಿದೆ. ಪ್ರಸ್ತುತ ಗ್ರಾಮೀಣ ಜನರಿಗೆ ಬೇಸಿಗೆಯಲ್ಲಿ ಕೆಲಸ ನೀಡಲು, ಮುಂಗಾರಿನ ತಯಾರಿಗೆ ಹಾಗೂ ವಲಸೆ ತಡೆಯುವ ಉದ್ದೇಶದಿಂದ ದುಡಿಯೋಣ ಬಾ ಅಭಿಯಾನ ಕೈಗೊಳ್ಳಲಾಗಿದೆ. ಪ್ರಸ್ತುತ ದಿನವೊಂದಕ್ಕೆ 289 ರಿಂದ 309ರೂ.ಗೆ ಕೂಲಿ ಹೆಚ್ಚಿಸಲಾಗಿದ್ದು, ಕೂಲಿಕಾರರಿಗೆ ತುಂಬಾ ಅನುಕೂಲವಾಗಲಿದೆ. ಈ ವರ್ಷವು ಕೂಡ ಪರಿಣಾಮಕಾರಿಯಾಗಿ ಯೋಜನೆಯನ್ನು ಜನರಿಗೆ ಮುಟ್ಟಿಸುವ ಪ್ರಯತ್ನ ಕೈಗೊಳ್ಳಲಾಗುವುದು. ಪ್ರಿಯಾಂಕಾ ಎಂ., ಜಿಪಂ ಸಿಇಒ, ಉತ್ತರ ಕನ್ನಡ.