Advertisement

ಪ್ರಕೃತಿ ವಿಕೋಪಗಳಿಗೆ ಪರಿಸರ ನಾಶ ಕಾರಣ

03:33 PM Jun 23, 2018 | Team Udayavani |

ಬಸವಕಲ್ಯಾಣ: ಆಧುನಿಕತೆ ಹೆಸರಿನಲ್ಲಿ ಪ್ರತಿನಿತ್ಯ ನಡೆಯುತ್ತಿರುವ ಪರಿಸರ ನಾಶವೇ ಪ್ರಕೃತಿ ವಿಕೋಪಗಳಿಗೆ ಮೂಲ ಕಾರಣ ಎಂದು ಖೇರ್ಡಾದ ಶಿವಲಿಂಗೇಶ್ವರ ಸಂಸ್ಥಾನ ಮಠದ ಶ್ರೀ ವಿಶ್ವನಾಥ ಮರಿದೇವರು ಹೇಳಿದರು.

Advertisement

ಖೇರ್ಡಾ ಗ್ರಾಮದ ಶ್ರೀ ಶಿವಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಬಸವಕಲ್ಯಾಣ, ಪರಿಸರ ವಾಹಿನಿ ಬೀದರ ಮತ್ತು ಚಾಲುಕ್ಯ ಶಿಕ್ಷಣ ಸಂಸ್ಥೆಯಿಂದ ಆಯೋಜಿಸಿದ್ದ ಪರಿಸರ ಸಂರಕ್ಷಣೆ ಕುರಿತ ಜನಜಾಗೃತಿ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ  ಅವರು, ನೈಸರ್ಗಿಕ ಸಂಪತ್ತು ಸಂರಕ್ಷಣೆಯಿಂದ ಮಾತ್ರ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದರು.

ಅಗತ್ಯಕಿಂತ ಹೆಚ್ಚು ಪ್ರಮಾಣದಲ್ಲಿ ವಾಹನ ಬಳಕೆಯಿಂದ ವಾಯು ಮಾಲಿನ್ಯವಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅಗತ್ಯವಿದ್ದಾಗ ಮಾತ್ರ ವಾಹನ ಬಳಸಬೇಕು. ಆಮ್ಲಜನಕ ಬಿಡುಗಡೆ ಮಾಡುವ ಬೇವು, ಅರಳಿ ಮರಗಳನ್ನ ಅಧಿಕ ಪ್ರಮಾಣದಲ್ಲಿ ಬೆಳಸಬೇಕು. ಮನೆ ಸೇರಿದಂತೆ ಸುತ್ತಲಿನ ಪರಿಸರದಲ್ಲಿ ಸಸಿಗಳನ್ನು ನೆಡುವ ಮೂಲಕ ಖೇರ್ಡಾ ಗ್ರಾಮವನ್ನು ಹಸಿರಿನಿಂದ ಸಮೃದ್ಧ ಗ್ರಾಮವಾನ್ನಾಗಿ ಮಾಡಲು ಪ್ರತಿಯೊಬ್ಬರು ವಿಶೇಷ
ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಪರಿಸರವಾದಿ ಶೈಲೇಂದ್ರ ಕಾವಡಿ ಮಾತನಾಡಿ, ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್‌ ಬಳಕೆಯಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಪ್ರತಿ ವರ್ಷ 80 ಲಕ್ಷ ಟನ್‌ಗಳಷ್ಟು ಪ್ಲಾಸ್ಟಿಕ್‌ ಕಸ ಸಮುದ್ರಗಳಿಗೆ ಸೇರಿ ಸಮುದ್ರದಲ್ಲಿರುವ ಜಲಚರಗಳ ವಿನಾಶಕ್ಕೆ ಕಾರಣವಾಗುತ್ತಿದೆ. ಪ್ಲಾಸ್ಟಿಕ್‌ ವಸ್ತುಗಳ ಬಳಕೆಯಿಂದ ದೂರವಿದ್ದು ಪ್ರತಿಯೊಬ್ಬರು ಪರಿಸರ ಸ್ನೇಹಿ ವಸ್ತುಗಳನ್ನು ಉಪಯೋಗಿಸಬೇಕು ಎಂದರು.

ಪರಿಸರ ವಾಹಿನಿಯಿಂದ ಖೇರ್ಡಾ ಗ್ರಾಮವನ್ನು ದತ್ತು ತೆಗೆದುಕೊಳ್ಳಲಾಗಿದ್ದು, ಪ್ರತಿವರ್ಷ ಸಾರ್ವಜನಿಕರಿಗೆ, ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಅರಿವಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

Advertisement

ಅರಣ್ಯ ರಕ್ಷಕರಾದ ಪ್ರಶಾಂತ ಗುರುಪಾದಯ್ಯ, ಸೂರ್ಯಕಾಂತ ಪಾಟೀಲ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಗ್ರಾಮದಲ್ಲಿ ಶಿವಲಿಂಗೇಶ್ವರ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಕುರಿತು ಅಭಿಯಾನ ನಡೆಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಬಸವೇಶ್ವರ ಯುವಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು. ಮಗುವಿಗೊಂದು ಮರ ಶಾಲೆಗೊಂದು ವನ ಯೋಜನೆಯಡಿ ವಿದ್ಯಾರ್ಥಿಗಳಿಗೆ ಸಸಿ
ವಿತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next