ನವದೆಹಲಿ: ಭಾರತದ ಉದಯೋನ್ಮುಖ ಶಕ್ತಿಯ ಹಿನ್ನೆಲೆಯಲ್ಲಿ ಯುದ್ಧಗ್ರಸ್ಥ ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಆಪರೇಶನ್ ಗಂಗಾ ಮೂಲಕ ಸುರಕ್ಷಿತವಾಗಿ ಸ್ಥಳಾಂತರಿಸಲು ಭಾರತಕ್ಕೆ ಸಾಧ್ಯವಾಗಿದೆ ಪ್ರಧಾನಿ ನರೇಂದ್ರ ಮೋದಿ ಬುಧವಾರ (ಮಾರ್ಚ್ 02) ತಿಳಿಸಿದ್ದಾರೆ.
ಇದನ್ನೂ ಓದಿ:ಘೋಷಣೆಗಷ್ಟೇ ಸೀಮಿತವಾಗುತ್ತಿದೆಯೇ ರಾಜ್ಯ ಬಜೆಟ್? ಜಾರಿಯಾಗದ ಯೋಜನೆಗಳ ಪಕ್ಷಿನೋಟ
ಉತ್ತರಪ್ರದೇಶದ ಸೋನ್ ಭದ್ರಾದಲ್ಲಿ ಚುನಾವಣಾ ಪ್ರಚಾರ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಮ್ಮ ಭಾರತದ ಶಕ್ತಿಯ ಏಳಿಗೆಯ ಪರಿಣಾಮ ನಾವು ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಸಾಧ್ಯವಾಗಿದೆ. ಇದಕ್ಕಾಗಿಯೇ ಆಪರೇಶನ್ ಗಂಗಾ ಮೂಲಕ ಸ್ಥಳಾಂತರದ ಕೆಲಸ ಮುಂದುವರಿಯುತ್ತಿದೆ ಎಂದು ಹೇಳಿದರು.
ಯುದ್ಧಗ್ರಸ್ಥ ಉಕ್ರೇನ್ ನಲ್ಲಿ ಸಿಲುಕಿರುವ ಪ್ರತಿಯೊಬ್ಬ ಭಾರತೀಯ ಪ್ರಜೆಯನ್ನು ತಾಯ್ನಾಡಿಗೆ ಸುರಕ್ಷಿತವಾಗಿ ಕರೆತರಲಾಗುವುದು ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಭರವಸೆ ನೀಡಿದರು. ಆಪರೇಶನ್ ಗಂಗಾ ಕಾರ್ಯಾಚರಣೆಯಡಿ ಜನರನ್ನು ಸ್ಥಳಾಂತರಿಸಲು ಎಲ್ಲಾ ರೀತಿಯಿಂದಲೂ ಪ್ರಯತ್ನಿಸಲಾಗುತ್ತಿದೆ ಎಂದರು.
ಈಗಾಗಲೇ ಉಕ್ರೇನ್ ನಿಂದ ಸಾವಿರಾರು ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಅಷ್ಟೇ ಕೇಂದ್ರ ಸಚಿವರ ನಾಲ್ವರ ತಂಡವನ್ನು ಭಾರತ ಉಕ್ರೇನ್ ಗೆ ಕಳುಹಿಸಲಾಗಿದ್ದು, ಯಾವೊಬ್ಬ ಭಾರತೀಯ ಪ್ರಜೆಯೂ ಪ್ರಾಣಾಪಾಯದಲ್ಲಿ ಸಿಲುಕಿಕೊಳ್ಳದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.
ಉತ್ತರಪ್ರದೇಶದಲ್ಲಿ ಮಾರ್ಚ್ 07ರಂದು ಕೊನೆಯ ಹಂತದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಉತ್ತರಪ್ರದೇಶ ಸೇರಿದಂತೆ ಎಲ್ಲಾ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಿಲಿದೆ.