Advertisement

Congress ಆಡಳಿತದಿಂದಾಗಿ ಮತಾಂಧ ಶಕ್ತಿಗಳ ವರ್ತನೆ ಅತಿರೇಕಕ್ಕೆ: ನಳಿನ್‌

12:25 AM Jun 12, 2024 | Team Udayavani |

ಮಂಗಳೂರು: ಬೊಳಿಯಾರ್‌ನಲ್ಲಿ ನಡೆದ ವಿಜಯೋತ್ಸವದಲ್ಲಿ ಭಾಗವಹಿಸಿದ ಇಬ್ಬರು ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಆಡಳಿತಕ್ಕೆ ಬಂದ ಬಳಿಕ ಮತಾಂಧ ಶಕ್ತಿಗಳ ವರ್ತನೆ ಅತಿರೇಕಕ್ಕೆ ಹೋಗುತ್ತಿದೆ ಎಂದು ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲು ಆರೋಪಿಸಿದರು.

Advertisement

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಮಸೀದಿ ಬಳಿ ಭಾರತ್‌ ಮಾತೆಗೆ ಜೈಕಾರ ಹಾಕಿದರೆಂಬ ಒಂದೇ ಕಾರಣಕ್ಕೆ ಹರೀಶ್‌ ಮತ್ತು ನಂದಕುಮಾರ್‌ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಈ ದೇಶದಲ್ಲಿ ಭಾರತ್‌ ಮಾತಾಕಿ ಜೈ ಹೇಳುವುದು ಅಪರಾಧವೇ? ಈ ಬಗ್ಗೆ ಮುಖ್ಯಮಂತ್ರಿ, ಗೃಹ ಸಚಿವರು ಉತ್ತರಿಸಬೇಕು ಎಂದು ಆಗ್ರಹಿಸಿದರು.ಈ ಪ್ರಕರಣದ ಹಿಂದಿರುವ ಎಲ್ಲ ದುಷ್ಟಶಕ್ತಿ ಗಳನ್ನು ಪತ್ತೆಹಚ್ಚಿ ಬಂಧಿಸಬೇಕು.

ಗಾಯಗೊಂಡವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.ಬಿಜೆಪಿ ವಿಜಯೋತ್ಸವ ಸಂದರ್ಭ ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದು, ಅಲ್ಲಿರುವ ಯುವಕರು ಈ ಘಟನೆಯಲ್ಲಿ ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ. ಹಾಗಾದರೆ ಪ್ರಾರ್ಥನೆಗೆ ಬಂದವರಿಗೆ ಚೂರಿ ಸಿಕ್ಕಿದ್ದು ಹೇಗೆ? ಶಸ್ತ್ರಾಸ್ತ್ರ ಹೇಗೆ ಬಂದಿತು? ಗೃಹ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದರು. ಶಾಸಕ ರಾಜೇಶ್‌ ನಾಯ್ಕ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next