Advertisement
ನಾಲ್ಕುವರ್ಷಗಳ ಹಿಂದೆ ನಿರ್ಮಿಸಿದ್ದ ಅಭಿವೃದ್ಧಿ ಪಡಿಸಿದ್ದ ಈ ಜೋಡಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತೆ 4 ಕೋಟಿ ರೂ. ವೆಚ್ಚದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ವೀರಯೋಧ ಶಿವಾನಂದ ವೃತ್ತದವರೆಗೆ ಅಭಿವೃದ್ಧಿ ಪಡಿಸುತ್ತಿದೆ. 2 ತಿಂಗಳ ಹಿಂದೆಯೇ ಕಾಮಗಾರಿಗೆ ಸಚಿವೆ ಡಾ.ಗೀತಾ ಭೂಮಿಪೂಜೆ ನೆರವೇರಿಸಿದ್ದರು. ಆಗ ಹಳೆ ರಸ್ತೆ ಅಗಲೀಕರಣ, ಚರಂಡಿ ನಿರ್ಮಾಣ ಕಾಮಗಾರಿ ಶೀಘ್ರ ಮುಗಿಸಿ ಸಾರ್ವಜನಿಕರ ಅನುಕೂಲಕ್ಕೆ ಅವಕಾಶ ಮಾಡಿ ಎಂದು ಸಚಿವ ಹೇಳಿದ್ದರೂ ಯಾವುದೇ ಕೆಲಸವಾಗಿಲ್ಲ, ಕಾಮಗಾರಿಯೂ ನಿಗದಿತ ವೇಗದಲ್ಲಿ ನಡೆಯುತ್ತಿಲ್ಲ.
ಕೃಷಿ ಪರಿಕರಗಳು, ದಿನಸಿ ಪದಾರ್ಥ ಮುಂತಾದ ವಸ್ತುಗಳನ್ನು ಖರೀದಿಸಲು ಬರುತ್ತಾರೆ. ಅವರಿಗೆ ವಾಹನಗಳನ್ನು ನಿಲ್ಲಿಸಲು ಜಾಗವಿಲ್ಲದೆ ಪರದಾಡುವಂತಾಗಿದೆ.
Related Articles
ದಾಟಲು ಪರದಾಡುವಂತಾಗಿದೆ. ರಸ್ತೆ ಬದಿಯಲ್ಲಿ ನಿರುಪಯುಕ್ತ ಪದಾರ್ಥಗಳನ್ನು ಹಾಕಲಾಗಿದೆ. ಚರಂಡಿಗೆ ಸ್ಲಾéಬ್ ಹಾಕದ ಕಾರಣ ಸಾರ್ವಜನಿಕರು ಅಂಗಡಿ ಮುಂಗಟ್ಟುಗಳಿಗೆ ತೆರಳಲು ಹಾಗೂ ಸಾಮಾನು ಸರಂಜಾಮು ಸಾಗಿಸಲು ಸಾಧ್ಯವಾಗದೆ ವ್ಯಾಪಾರ ವಹಿವಾಟುಗಳಿಗೆ ಅಡ್ಡಿಯುಂಟಾಗಿದೆ.
Advertisement
ವ್ಯಾಪಾರಿಗಳು ತಮ್ಮ ಮಳಿಗೆಗಳ ಮುಂದೆ ರಸ್ತೆಯಲ್ಲೇ ತಮ್ಮ ವಾಹನಗಳನ್ನು ನಿಲ್ಲಿಸಿಕೊಳ್ಳು ತ್ತಿರುವುದು ಸಂಚಾರಕ್ಕೆ ತೀವ್ರ ಅಡಚಣೆ ಯುಂಟಾಗಿದೆ. ಕೆಲವೊಮ್ಮೆ ಅರ್ಧಗಂಟೆಗೂ ಹೆಚ್ಚು ಕಾಲ ಸಂಚಾರ ದಟ್ಟಣೆ ಉಂಟಾಗುತ್ತದೆ. ಕೂಡಲೇ ರಸ್ತೆ ಅಭಿವೃದ್ಧಿ ಕಾಮಗಾರಿ ಯಿಂದಾಗುತ್ತಿರುವ ತೊಂದರೆಯನ್ನು ನಿವಾರಿಸಿ ಶೀಘ್ರ ರಸ್ತೆ ನಿರ್ಮಾಣ ಮಾಡಲು ಕ್ರಮಕೈಗೊಳ್ಳಬೇಕು ಎಂದು ಪಟ್ಟಣದ ನಿವಾಸಿ ಎನ್. ಮಂಜುನಾಥ್ ಆಗ್ರಹಿಸಿದ್ದಾರೆ.
ಚರಂಡಿ ನಿರ್ಮಾಣಕ್ಕೆ ಅಡ್ಡಿಯಾಗಿರುವ ಕಟ್ಟಡಗಳನ್ನು ತೆರವುಗೊಳಿಸಿ ಕೊಡುವಂತೆ ಪುರಸಭೆಗೆ ಮನವಿ ಮಾಡಿದ್ದರೂ ಇನ್ನೂ ಸಾಧ್ಯವಾಗಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕಾಮಗಾರಿಯನ್ನು ಬೇಗನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.●ಕಾಂತರಾಜು, ರಾ.ಹೆ ನಿಗಮದ ಎಂಜಿನಿಯರ್.