Advertisement
ಮೊದಲ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ನಡೆದ ಮತ ದಾನ ದಲ್ಲಿ ಮಂಡ್ಯ ಕ್ಷೇತ್ರದಲ್ಲಿ ಗರಿಷ್ಠ ಮತದಾನವಾಗಿದೆ. ಇಲ್ಲಿ ಶೇ.80.23 ಮತದಾನವಾಗಿದೆ. ಅತೀ ಕಡಿಮೆ ಎಂದರೆ, ಬೆಂಗಳೂರು ಕೇಂದ್ರದಲ್ಲಿ ಶೇ.49.76ರಷ್ಟು ಮತದಾನವಾಗಿದ್ದು, ಓಟ್ ಮಾಡಲು ನಗರದ ಜನ ನಿರಾಸಕ್ತಿ ತೋರಿದ್ದಾರೆ. ಉಳಿದಂತೆ ದ.ಕ.ದಲ್ಲೂ ಉತ್ತಮ ಮತದಾನವಾಗಿದೆ. 14 ಕ್ಷೇತ್ರಗಳಲ್ಲಿ ಒಟ್ಟಾರೆಯಾಗಿ ಶೇ.67.67ರಷ್ಟು ಮತದಾನವಾಗಿದೆ.
ಹೈ ವೋಲ್ಟೆàಜ್ ಕ್ಷೇತ್ರ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮದ್ದೂರಿನ ದೊಡ್ಡರಸಿಕೆರೆಯಲ್ಲಿ ಮಾತಿನ ಚಕಮಕಿ ಮತ್ತು ಹೊಡೆದಾಟ ಸಂಭವಿಸಿದೆ. ದೊಡ್ಡರಸಿನಕೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖೀಲ್ ಅವರು ರೋಡ್‌ಶೋ ಮೂಲಕ ಪ್ರಚಾರ ನಡೆಸಿದರು. ದೊಡ್ಡರಸಿನಕೆರೆಯಲ್ಲಿ ಮತದಾನ ಮಾಡಲು ಬಂದಿದ್ದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಮತದಾನದ ಅನಂತರ ಗ್ರಾಮದಲ್ಲಿ ಪಾದಯಾತ್ರೆ ಮೂಲಕ ಪ್ರಚಾರ ಮಾಡಲು ಮುಂದಾದಾಗ ಜೆಡಿಎಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿ ನಿಖೀಲ್‌ಗೆ ಅವಕಾಶ ಕೊಟ್ಟು ಇವರಿಗೆ ಯಾಕೆ ಆಕ್ಷೇಪ ಎಂದು ವಿರೋಧ ತೋರಿದರು. ಆಗ ಸುಮಲತಾ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಯಿತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಎರಡೂ ಗುಂಪುಗಳನ್ನು ಚದುರಿಸಿದರು.
Related Articles
Advertisement
ಹಣ ಹಂಚಿಕೆಮತದಾನದ ದಿನವೂ ಹಲವೆಡೆ ಬಹಿರಂಗವಾಗಿ ಹಣ ಹಂಚಿಕೆ ಮಾಡುತ್ತಿದ್ದ ಪ್ರಕರಣಗಳು ನಡೆದಿದ್ದು, ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಯುವಕನೊಬ್ಬನ್ನು ಬಂಧಿಸಲಾಯಿತು. ಅದೇ ರೀತಿ ಚಿಂತಾಮಣಿಯಲ್ಲಿ ಮತಗಟ್ಟೆ ಸಮೀಪ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಹಂಚಿಕೆ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಗರ ಮನೆ ಮೇಲೆ ಚುನಾವಣ ಆಯೋಗದ ಅಧಿಕಾರಿಗಳು ದಾಳಿ ನಡೆಸಿ 15 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ. ಮಧುಗಿರಿಯಲ್ಲಿ ಹಣ ಹಂಚಿಕೆ ಮಾಡುತ್ತಿದ್ದ ಎಂಜಿನಿಯರಿಂಗ್ ಕಾಲೇಜಿನ ಅಟೆಂಡರ್ ರಾಜುವನ್ನು ಬಂಧಿಸಿ 5.80 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಕಾಲೇಜಿನ ಸಮೀಪ ಹಣ ಹಂಚಿಕೆ ಮಾಡುತ್ತಿದ್ದು ಈ ಕಾಲೇಜು ಬಿಜೆಪಿ ಅಭ್ಯರ್ಥಿಗೆ ಸೇರಿದ್ದು ಎಂದು ಹೇಳಲಾಗಿದೆ. ಕೆಜಿಎಫ್ನ ಸ್ವರ್ಣ ನಗರ ಮತಗಟ್ಟೆಯಲ್ಲಿ ಹಣ ಹಂಚಿಕೆ ಮಾಡುತ್ತಿದ್ದು ಕಾಂಗ್ರೆಸ್ ಕಾರ್ಯಕರ್ತನನ್ನು ಬಂಧಿಸಲಾಗಿದೆ. ಮೊಬೈಲ್‌ನಲ್ಲಿ ವೀಡಿಯೋ-ವೈರಲ್
ಮತಗಟ್ಟೆಗಳಿಗೆ ಮೊಬೈಲ್ ಕೊಂಡೊಯ್ಯುವುದಕ್ಕೆ ನಿಷೇಧ ಹೇರಲಾಗಿದ್ದರೂ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಪರ ಮತ ಚಲಾಯಿಸಿದ ವೀಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಕಾಣಿಸಿಕೊಂಡವು. ತಿಂಗಳು ಕಾಯಬೇಕು
ಅಭ್ಯರ್ಥಿಗಳ ಭವಿಷ್ಯ ಇವಿಎಂ ಯಂತ್ರಗಳಲ್ಲಿ ಭದ್ರ ವಾಗಿದ್ದು, ಫಲಿತಾಂಶಕ್ಕಾಗಿ ಒಂದು ತಿಂಗಳು ಕಾಯಬೇಕು. ಮೇ 23ರಂದು ಮತ ಎಣಿಕೆ ನಡೆಯಲಿದೆ ದಾಖಲೆ ಮುರಿದ ದ.ಕ., ಉಡುಪಿ
ಮಂಗಳೂರು/ಉಡುಪಿ: ಈ ಬಾರಿಯ ಲೋಕಸಭಾ ಚುನಾ ವಣೆ ಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳು ಮತದಾನದಲ್ಲಿ ದಾಖಲೆಯನ್ನು ನಿರ್ಮಿಸಿವೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ದಲ್ಲಿ ಶೇ. 77.78ರಷ್ಟು ಪ್ರಮಾಣದ ಮತದಾನ ವಾಗಿದೆ. 2014ಕ್ಕೆ ಹೋಲಿಸಿದರೆ ಈ ಬಾರಿ ಮತದಾನದಲ್ಲಿ ತುಸು ಹೆಚ್ಚಳವಾಗಿದ್ದು, ಹಿಂದಿನ ದಾಖಲೆಯನ್ನು ಮುರಿದಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರ ದಲ್ಲಿ ಶೇ.77.19 ಮತದಾನವಾಗಿದ್ದು, ಅದು ರಾಜ್ಯದಲ್ಲೇ ಅತೀ ಹೆಚ್ಚು ಎಂಬ ಹೆಗ್ಗಳಿಕೆ ಪಡೆದಿತ್ತು. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಶೇ.75.8 ಮತದಾನವಾಗಿರುವುದು ಸಾರ್ವಕಾಲಿಕ ದಾಖಲೆಯಾಗಿದೆ. 2014ರಲ್ಲಿ ಶೇ. 74.46 ಮತದಾನ ವಾಗಿತ್ತು. ಹಿಂದಿನ ಬಾರಿಗೆ ಹೋಲಿ ಸಿದರೆ ತುಸು ಹೆಚ್ಚಾಗಿದೆ. ಅಂತಿಮ ಲೆಕ್ಕಾ ಚಾರ ದಲ್ಲಿ ಶುಕ್ರವಾರ ಸ್ವಲ್ಪ ಹೆಚ್ಚು ಕಡಿಮೆ ಯಾಗಬಹುದು.