Advertisement

ಮಲಯಾಳಂ ನಟ ದುಲ್ಖರ್ ಸಲ್ಮಾನ್ ಗೆ ಕೋವಿಡ್ ಸೋಂಕು ದೃಢ

09:06 AM Jan 21, 2022 | Team Udayavani |

ಕೊಚ್ಚಿನ್: ಮಲಯಾಳಂ ಚಿತ್ರ ನಟ ದುಲ್ಖರ್ ಸಲ್ಮಾನ್ ಅವರಿಗೆ ಕೋವಿಡ್ 19 ಸೋಂಕು ದೃಢವಾಗಿದ್ದು, ರೋಗ ಲಕ್ಷಣಗಳೊಂದಿಗೆ ಐಸೋಲೇಟ್ ಆಗಿದ್ದಾರೆ. ಈ ಬಗ್ಗೆ ಸ್ವತಃ ನಟ ಸಲ್ಮಾನ್ ಖಚಿತಪಡಿಸಿದ್ದಾರೆ.

Advertisement

ದುಲ್ಖರ್ ಸಲ್ಮಾನ್ ತಂದೆ ಮುಮ್ಮಟ್ಟಿ ಅವರಿಗೂ ಕೆಲ ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಆಗಿತ್ತು.

“ನನಗೆ ಕೋವಿಡ್ 19 ಸೋಂಕು ದೃಢವಾಗಿದೆ. ನಾನು ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಜ್ವರ ಸಹಿತ ರೋಗಲಕ್ಷಣಗಳನ್ನು ಹೊಂದಿದ್ದು, ಆದರೆ ಆರೋಗ್ಯವಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಚಿತ್ರೀಕರಣದ ಸಮಯದಲ್ಲಿ ನನ್ನೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಜನರು, ದಯವಿಟ್ಟು ಐಸೋಲೇಶನ್ ಗೆ ಒಳಗಾಗಿ ಮತ್ತು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ನಟ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:2022 ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಭಾರತಕ್ಕೆ ಮೊದಲ ಎದುರಾಳಿ ಪಾಕಿಸ್ಥಾನ!

ಸಲ್ಮಾನ್ ತಂದೆ, ಸ್ಟಾರ್ ನಟ ಮಮ್ಮುಟ್ಟಿ ಅವರು ಜನವರಿ 16 ರಂದು ತಮಗೆ ಕೋವಿಡ್ -19 ಸೋಂಕು ದೃಢವಾದ ಸುದ್ದಿಯನ್ನು ಹಂಚಿಕೊಂಡಿದ್ದರು.  ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಅವರು ವೈರಸ್‌ಗೆ ತುತ್ತಾಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next