Advertisement
ಜಿಮ್ ಟ್ರೈನರ್ ಆಗಿರುವ ಪಾನಿಪುರಿ ಕಿಟ್ಟಿ ಅವರ ತಮ್ಮನ ಮಗ ಮಾರುತಿ ಗೌಡ ಎನ್ನುವ ಯುವಕನನ್ನು ದುನಿಯಾ ವಿಜಿ ಮತ್ತು ಮೂವರು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದೆ.
Related Articles
Advertisement
ಪ್ರಸಾದ್ ಎನ್ನುವ ವ್ಯಕ್ತಿ ಜಗಳಕ್ಕೆ ಕಾರಣ ಎಂದು ಪಾನಿಪುರಿ ಕಿಟ್ಟಿ ಹೇಳಿಕೆ ನೀಡಿದ್ದಾರೆ.
ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನಲೆಯಲ್ಲಿ ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿತ್ತು.
ಗಂಭೀರವಾಗಿ ಹಲ್ಲೆಗೊಳಗಾದ ಮಾರುತಿ ಗೌಡ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ತುಟಿಗಳು ಒಡೆದಿದ್ದು, ಕಣ್ಣಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಆಸ್ಪತ್ರೆಗೆ ಸಿಸಿಬಿ ಪೊಲೀಸರು ಆಗಮಿಸಿ ಹೇಳಿಕೆ ಪಡೆದುಕೊಂಡಿದ್ದಾರೆ.
ದುನಿಯಾ ವಿಜಯ್ ಅವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಹಲ್ಲೆ ನಡೆಸಿದ್ದು ನಾನೇ ಎಂದು ವಿಜಯ್ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆ ವಿಜಯ್ ಮತ್ತು ಇತರ ಆರೋಪಿಗಳನ್ನು ಜಡ್ಜ್ ನಿವಾಸದಲ್ಲಿ ಜಾಮೀನಿಗಾಗಿ ಹಾಜರು ಪಡಿಸುವ ಸಾಧ್ಯತೆಗಳಿವೆ.