Advertisement

ಪತ್ನಿಯರ ಜಗಳ; ದುನಿಯಾ ವಿಜಿ ಮೊದಲ ಪತ್ನಿ ನಾಗರತ್ನಗೆ ಮಧ್ಯಂತರ ಬೇಲ್

06:26 PM Nov 05, 2018 | Sharanya Alva |

ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಎರಡನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರತ್ನಗೆ ಸೆಷನ್ಸ್ ನ್ಯಾಯಾಲಯ ಸೋಮವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Advertisement

ದುನಿಯಾ ವಿಜಿ ಮೊದಲ ಪತ್ನಿ ನಾಗರತ್ನ ಕೀರ್ತಿ ಗೌಡ ಮೇಲೆ ಹಲ್ಲೆ ನಡೆಸಿದ ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದು, ಬಳಿಕ ನಿರೀಕ್ಷಣಾ ಜಾಮೀನು ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು.

ನಾಗರತ್ನಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ, ದೀಪಾವಳಿ ಹಬ್ಬವಿರುವುದರಿಂದ ನಿರೀಕ್ಷಣಾ ಜಾಮೀನು ನೀಡಬೇಕೆಂದು ನಾಗರತ್ನ ಪರ ವಕೀಲರು ವಾದಿಸಿದ್ದರು. 50 ಸಾವಿರ ರೂಪಾಯಿ ಬಾಂಡ್, ಒಬ್ಬರ ಶ್ಯೂರಿಟಿ ಸೇರಿದಂತೆ ನಾಗರತ್ನಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನಿರೀಕ್ಷಣಾ ಜಾಮೀನು ಅರ್ಜಿ ಇತ್ಯರ್ಥವಾಗುವವರೆಗೆ ಮಧ್ಯಂತರ ಜಾಮೀನು ನೀಡಲಾಗಿದೆ ಎಂದು ಕೋರ್ಟ್ ಹೇಳಿದೆ.

ನಾಗರತ್ನ ತನಿಖೆಗೆ ಸಹಕರಿಸಬೇಕು ಎಂದು ಸೂಚನೆ ನೀಡಿರುವ ಕೋರ್ಟ್, ನವೆಂಬರ್ 12ಕ್ಕೆ ವಿಚಾರಣೆಯನ್ನು ಮುಂದೂಡಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next