Advertisement

Kannada Movie: ಎಸ್‌.ನಾರಾಯಣ್‌ ಚಿತ್ರದಲ್ಲಿ ದುನಿಯಾ ವಿಜಯ್‌

10:07 AM Jun 04, 2024 | Team Udayavani |

ನಟ ದುನಿಯಾ ವಿಜಯ್‌ ಹಾಗೂ ನವನಟ ಶ್ರೇಯಸ್‌ ಮಂಜು ಹೊಸ ಚಿತ್ರವೊಂದರಲ್ಲಿ ಒಟ್ಟಿಗೆ ನಟಿಸುತ್ತಿದ್ದು, ಜೂನ್‌ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗುತ್ತಿದೆ. ಎಸ್‌. ನಾರಾ ಯಣ್‌ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.

Advertisement

ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್‌ ಮಂಜು ಮುಂತಾದ ಕಲಾವಿದರ ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಕೆ.ಮಂಜು ಹಾಗೂ ರಮೇಶ್‌ ಯಾದವ್‌ ಜಂಟಿಯಾಗಿ ಈಶ ಪ್ರೊಡಕ್ಷನ್ಸ್‌ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್‌ನಲ್ಲಿ ಮೂಲಕ ನಿರ್ಮಾಣ ವಾಗುತ್ತಿರುವ ಮೊದಲ ಚಿತ್ರವಿದು.

ಸದ್ಯದಲ್ಲೇ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ. ದುನಿಯಾ ವಿಜಯ್‌ ಹಾಗೂ ಶ್ರೇಯಸ್‌ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿ ಸುತ್ತಿರುವ ಈ ಚಿತ್ರದ ನಾಯಕಿ ಬೃಂದಾ. ವಿಭಿನ್ನ ಪಾತ್ರದಲ್ಲಿ ಸಾಧುಕೋಕಿಲ ಸಹ ಕಾಣಿಸಿ ಕೊಳ್ಳುತ್ತಿದ್ದಾರೆ. ರಂಗಾಯಣ ರಘು, ತಾರಾ ಅನುರಾಧ, ಶರತ್‌ ಲೋಹಿತಾಶ್ವ, ಪ್ರಮೋದ್‌ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್‌ ಶಾಸ್ತ್ರಿ, ಮಂಜು ಪಾವಗಡ ಸೇರಿದಂತೆ ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಎಸ್‌.ನಾರಾ ಯಣ್‌ ಅವರು ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸು ತ್ತಿರುವ ಈ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಅವರ ಸಂಗೀತ ನಿರ್ದೇಶನವಿದೆ. ಪಿ.ಕೆ.ಹೆಚ್‌ ದಾಸ್‌ ಛಾಯಾ ಗ್ರಹಣ, ಶಿವಪ್ರಸಾದ್‌ ಯಾದವ್‌ ಸಂಕಲನ, ವಿನೋದ್‌ ಸಾಹಸ ನಿರ್ದೇಶನ ಹಾಗೂ ಸಂತು ಅವರ ನೃತ್ಯ ನಿರ್ದೇಶನವಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next