Advertisement

ದಸರಾ ಹಬ್ಬಕ್ಕೆ ದುನಿಯಾ ವಿಜಯ್ ಅಭಿಮಾನಿಗಳಿಗೆ ಭರ್ಜರಿ ರಸದೌತಣ

03:13 PM Sep 26, 2021 | Team Udayavani |

ಬೆಂಗಳೂರು: ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶಿಸಿ ನಟಿಸಿರುವ ಸಲಗ ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 14 ರಂದು ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ.

Advertisement

ಈ ಹಿಂದೆ ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ ಅಗಸ್ಟ್‌ 20 ರಂದು ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಆದರೆ, ಕೋವಿಡ್ ಸೋಂಕಿನ ಮೂರನೇ ಅಲೆಯ ಭಯ ಹಾಗೂ ಚಿತ್ರಮಂದಿರಗಳಲ್ಲಿ 100 % ಸೀಟು ಭರ್ತಿಗೆ ಅವಕಾಶ ಇಲ್ಲದಿದ್ದರಿಂದ ಬಿಡುಗಡೆಯ ದಿನಾಂಕವನ್ನು ಹಿಂದಕ್ಕೆ ಪಡೆದುಕೊಂಡಿತ್ತು. ಇದೀಗ ಚಿತ್ರಮಂದಿರಗಳ ಹೌಸ್  ಫುಲ್ ಪ್ರದರ್ಶನಕ್ಕೆ ಸರ್ಕಾರದಿಂದ ಅನುಮತಿ ದೊರೆತಿದ್ದು, ಅಕ್ಟೋಬರ್ 14 ರಂದು ದಸರಾ ಹಬ್ಬದ ನಿಮಿತ್ತ ಸಿನಿಮಾ ಬಿಡುಗಡೆಯಾಗುತ್ತಿದೆ.

ಇನ್ನು ಇಷ್ಟು ದಿನಗಳ ಕಾಲ ತೆರೆ ಮೇಲೆ ನಾಯಕನಾಗಿ ಮಿಂಚುತ್ತಿದ್ದ ವಿಜಯ್ ‘ಸಲಗ’ ಚಿತ್ರದ ಮೂಲಕ ನಿರ್ದೇಶಕರಾಗಿ ಎಂಟ್ರಿ ಕೊಡುತ್ತಿದ್ದಾರೆ. ಕೆಪಿ ಶ್ರೀಕಾಂತ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರದ ಸಂಜಯ್ ಆನಂದ್ ನಾಯಕಿಯಾಗಿದ್ದಾರೆ. ಅಚ್ಯುತ ಕುಮಾರ್, ರಂಘಾಯಣ ರಘು ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ.

ಕೋವಿಡ್ ಎರಡನೇ ಅಲೆ ಲಾಕ್‌ಡೌನ್‌ಗೂ ಮುನ್ನವೇ ಸಲಗ ಚಿತ್ರದ ಪ್ರಮೋಷನ್‌ ಸಾಂಗ್ ಚಿತ್ರೀಕರಣ ಮಾಡಲಾಗಿತ್ತು. ದುಬಾರಿ ಸೆಟ್ ಹಾಕುವ ಮೂಲಕ ಅಭಿಮಾನಿಗಳ ಗಮನ ಸೆಳೆದಿತ್ತು. ಈ ಚಿತ್ರದ ಟಿಣಿಂಗ ಮಿಣಿಂಗ ಸಾಂಗ್ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಖ್ಯಾತಿ ಪಡೆದಿದ್ದು, ವಿಶೇಷವಾಗಿ ಮೂಡಿ ಬಂದಿರುವ ಇದು ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next