Advertisement

ನಕಲಿ ಅಂಕಪಟ್ಟಿ: 51 ವಿದ್ಯಾರ್ಥಿಗಳ ಪ್ರವೇಶ ತಿರಸ್ಕರಿಸಿದ VTU

11:46 PM May 17, 2023 | Team Udayavani |

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪಟ್ಟಿಯಲ್ಲಿ ಇಲ್ಲದ ಕಾಲೇಜಿನ ದ್ವಿತೀಯ ಪಿಯು ಅಂಕಪಟ್ಟಿಯ ಕಾರಣ ನೀಡಿ 51 ವಿದ್ಯಾರ್ಥಿಗಳ ಎಂಜಿನಿಯರಿಂಗ್‌ ಪ್ರವೇಶವನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ. ತಿರಸ್ಕರಿಸಿದೆ. ಮೊದಲ ವರ್ಷದ ಎಂಜಿನಿಯರಿಂಗ್‌ನ ವಿವಿಧ ವಿಭಾಗಗಳಿಗೆ 51 ವಿದ್ಯಾರ್ಥಿಗಳು ಪ್ರವೇಶ ಬಯಸಿದ್ದರು. ಈ ಎಲ್ಲ ವಿದ್ಯಾರ್ಥಿಗಳ ದ್ವಿತೀಯ ಪಿಯು ಅಂಕಪಟ್ಟಿಯನ್ನು ಪರಿಶೀಲಿಸಿದಾಗ ನಕಲಿ ಎಂಬುದು ಸಾಬೀತಾದ ಹಿನ್ನೆಲೆಯಲ್ಲಿ 51 ವಿದ್ಯಾರ್ಥಿಗಳ ಪ್ರವೇಶವನ್ನು ವಿಟಿಯು ತಿರಸ್ಕರಿಸಿದೆ. ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಓಪನ್‌ ಸ್ಕೂಲಿಂಗ್‌ ನೀಡಿದ ಪ್ರಮಾಣ ಪತ್ರ ನಕಲಿ ಎಂಬುದು ಸಾಬೀತಾಗಿದೆ. ದಾಖಲೆಗಳ ಪರಿಶೀಲನೆ ವೇಳೆ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ವೇಳೆ ಎನ್‌ಐಒಎಸ್‌ ನೀಡಿದ ಅಂಕಪಟ್ಟಿ ನಕಲಿ ಎಂಬುದು ದೃಢಪಟ್ಟಿದೆ. ಹೀಗಾಗಿ 51 ವಿದ್ಯಾರ್ಥಿಗಳ ಪ್ರವೇಶಕ್ಕೆ ವಿಟಿಯು ತಿರಸ್ಕರಿಸಿದೆ.

Advertisement

ಇದಕ್ಕೂ ಮುನ್ನ ಎಲ್ಲ ಅಂಕಪಟ್ಟಿಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆ ಮಾನ್ಯ ಮಾಡಿತ್ತು. ಆದರೆ ಕಾಲೇಜುವಾರು ಅನುಮೋದನೆ ನೀಡುವಾಗ ವಿಟಿಯು ಅಮಾನ್ಯ ಮಾಡಿದೆ. 51 ವಿದ್ಯಾರ್ಥಿಗಳು ಮ್ಯಾನೇಜ್‌ಮೆಂಟ್‌ ಕೋಟಾದಡಿ ಪ್ರವೇಶ ಬಯಸಿದ್ದರು. ಎಲ್ಲ ವಿದ್ಯಾರ್ಥಿಗಳು ತುಮಕೂರು, ಚಿಕ್ಕಬಳ್ಳಾಪುರ ಮೂಲದವರೆನ್ನಲಾಗಿದೆ. ಈ ಎಲ್ಲ ವಿದ್ಯಾರ್ಥಿಗಳು ಬೆಂಗಳೂರಿನ ಪ್ರತಿಷ್ಠಿತ ಎಂಜಿನಿಯರಿಂಗ್‌ ಕಾಲೇಜಿಗೆ ಪ್ರವೇಶ ಬಯಸಿದ್ದರು ಎಂಬುದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next