Advertisement

Durga ಪೆಂಡಾಲ್‌ ಮೇಲೆ ಗುಂಡಿನ ದಾಳಿ: ನಾಲ್ವರಿಗೆ ಗಾಯ

01:50 AM Oct 14, 2024 | Team Udayavani |

ಪಟ್ನಾ: ದುರ್ಗಾ ಪೂಜೆ ನಡೆಯುತ್ತಿದ್ದ ಪೆಂಡಾಲ್‌ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ನಾಲ್ವರು ಗಾಯಗೊಂಡ ಘಟನೆ ಬಿಹಾರದ ಅರ್ರಾದಲ್ಲಿ ನಡೆದಿದೆ. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಪೊಲೀಸರು 2 ಬುಲೆಟ್‌ ಕೇಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಇಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next