ಭದೋಹಿ : ದುರ್ಗಾಪೂಜಾ ಪೆಂಡಾಲ್ ನಲ್ಲಿ ಭಾನುವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿ ಮೂವರು ಸಾವನ್ನಪ್ಪಿದ್ದು, 64 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಭದೋಹಿ ಜಿಲ್ಲೆಯ ಔರಾಯ್ ನಲ್ಲಿ ಸಂಭವಿಸಿದೆ.
45 ವರ್ಷದ ಮಹಿಳೆ ಮತ್ತು 12 ವರ್ಷದ ಬಾಲಕ ಭಾನುವಾರ ರಾತ್ರಿ ಸಾವನ್ನಪ್ಪಿದ್ದರೆ, 10 ವರ್ಷದ ಬಾಲಕ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರಂಗ್ ರಾಠಿ ತಿಳಿಸಿದ್ದಾರೆ.
ಔರಾಯ್ ನಲ್ಲಿ ದುರ್ಗಾಪೂಜೆ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು ಈ ವೇಳೆ ಬೆಂಕಿ ಹತ್ತಿಕೊಂಡಿದೆ. ಘಟನೆಯಲ್ಲಿ 64 ಜನರಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ರಾತ್ರಿ 9 ಗಂಟೆ ಸುಮಾರಿಗೆ ಪಂಡಲ್‌ನಲ್ಲಿ ಆರತಿ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಹಠಾತ್ ಬೆಂಕಿ ಕಾಣಿಸಿಕೊಂಡು ಇಡೀ ಪೆಂಡಾಲ್ ಗೆ ವ್ಯಾಪಿಸಿದ್ದು, ಈ ವೇಳೆ ಓದುವ ಭರದಲ್ಲಿ ಕಾಲ್ತುಳಿತ ಉಂಟಾಗಿದೆ. ಪೆಂಡಾಲ್ ಒಳಗೆ ಕಡಿಮೆ ಸ್ಥಳ ಇದ್ದುದರಿಂದ ಜನ ಹೊರ ಬರಲಾರದೆ ಹಲವರಿಗೆ ಸುಟ್ಟ ಗಾಯಗಳಾಗಿವೆ.
ಇದನ್ನೂ ಓದಿ : ಸದ್ದಿಲ್ಲದೇ ಮಂಗಳಯಾನ ಮುಕ್ತಾಯ? ಭೂಮಿ ಜತೆಗಿನ ಸಂಪರ್ಕ ಬಂದ್