Advertisement

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

02:20 PM Jun 30, 2024 | Team Udayavani |

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಹೀಗಾಗಿ ಈ ವಿಷಯದಲ್ಲಿ ಚರ್ಚೆ ಅನಗತ್ಯ ಎಂದು ಬೆಳಗಾವಿಯಲ್ಲಿ ಸಚಿವ ಎಚ್ ಸಿ ಮಹಾದೇವಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಐದು ವರ್ಷ ಅಧಿಕಾರ ನಡೆಸುವಂತೆ ಜನರು ನಮಗೆ ಅವಕಾಶ ನೀಡಿದ್ದಾರೆ. ಪಕ್ಷದ ಹೈಕಮಾಂಡ್ ವೀಕ್ಷಕರನ್ನು ಕಳುಹಿಸಿ ಶಾಸಕರ ಅಭಿಪ್ರಾಯ ಸಂಗ್ರಹ ಮಾಡಿ ಸಿಎಂ ಮಾಡಿದ್ದಾರೆ. ಶಾಸಕರ ಅಭಿಪ್ರಾಯದಂತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ನೇಮಕವಾಗಿದ್ದಾರೆ. ಸಿಎಂ ಹುದ್ದೆ ಖಾಲಿ ಇಲ್ಲ ಎನ್ನುವಾಗ ಇದರ ಬಗ್ಗೆ ಚರ್ಚೆ ಅನವಶ್ಯಕ ಎಂದರು.

ಮುಖ್ಯಮಂತ್ರಿ ನೇಮಕ ಸಂದರ್ಭದಲ್ಲಿ ಹೈಕಮಾಂಡ್ ಏನೇನು ಚರ್ಚೆ ಮಾಡಿದೆ ಎಂಬುದನ್ನು ಬಹಿರಂಗಪಡಿಸಲು ಬರುವದಿಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು. ಅದರ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

ಪಕ್ಷದ ಹಿತದೃಷ್ಟಿಯಿಂದ ಆಂತರಿಕವಾಗಿ ಇದು ಚರ್ಚೆಯಾಗಬೇಕು. ಆದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವಿಚಾರದಲ್ಲಿ ಹೈಕಮಾಂಡ್ ಮುಂದೆ ಚರ್ಚೆಯಾಗಿಲ್ಲ. ದೆಹಲಿ ಭೇಟಿ ವೇಳೆ ಕೇವಲ ಅಭಿವೃದ್ಧಿ ವಿಚಾರ, ಪಕ್ಷ ಸಂಘಟನೆ ವಿಚಾರದಲ್ಲಿ ಚರ್ಚೆ ನಡೆದಿದೆ ಎಂದು ಸ್ಪಷ್ಟವಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next