Advertisement
ಖಾಸಗಿ ಕಾರ್ಯಕ್ರಮ ನಿಮಿತ್ತ ಭಾನುವಾರ ಮೈಸೂರಿಗೆ ಆಗಮಿಸಿದ ಅವರು, ಸರ್ಕಾರಿ ಅತಿಥಿ ಗೃಹದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ದಸರಾ ಮಹೋತ್ಸವವನ್ನು ವೈಭವಯುತವಾಗಿ ನಡೆಸಲು ಮಾರ್ಗದರ್ಶನ ನೀಡಿದರು. ಹಾಗೆಯೇ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಜಿಲ್ಲಾಧಿಕಾರಿ ರಂದೀಪ್‌ರಿಂದ ಪಡೆದುಕೊಂಡರು.
Related Articles
Advertisement
ಮಳೆ ಬರುತ್ತಿರುವುದರಿಂದ ಕೆಲವು ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಗುಂಡಿ ಮುಚ್ಚಿ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ರಂದೀಪ್ ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ, ನಗರ ಪೊಲೀಸ್ ಆಯುಕ್ತರಾದ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್, ಐಜಿಪಿ ವಿಫುಲ್‌ಕುಮಾರ್, ಜಿಪಂ ಸಿಇಒ ಪಿ.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೀಶ್ ಸೇರಿದಂತೆ ಜಿಲ್ಲಾಮಟ್ಟದ ಹಲವು ಅಧಿಕಾರಿಗಳು ಇದ್ದರು.
“ಬೆಂಗಳೂರಲ್ಲಿ ಮಳೆಯಿಂದಾಗುವ ಸಮಸ್ಯೆ ನಿಭಾಯಿಸಲು ಕ್ರಮ’ಮೈಸೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಉಂಟಾಗಿರುವ ಸಮಸ್ಯೆ ನಿವಾರಣೆಗೆ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜಕಾಲುವೆಗಳ ಒತ್ತುವರಿ, ರಾಜಕಾಲುವೆಗಳ ಮೇಲೆ ಕಟ್ಟಡಗಳನ್ನು ಕಟ್ಟಿರುವುದರಿಂದ ಸಮಸ್ಯೆ ಉಂಟಾಗುತ್ತಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಬಿಬಿಎಂಪಿ ಆಡಳಿತಕ್ಕೆ ಕ್ರಮಕ್ಕೆ ಸೂಚಿಸಿದ್ದೇನೆ. ಸಚಿವ ಜಾರ್ಜ್ ಬೆಳಗಿನ ಜಾವ 3ಗಂಟೆವರೆಗೂ ಕೆಲಸ ಮಾಡುತ್ತಿದ್ದಾರೆ. ಒತ್ತುವರಿಯಾಗಿರುವ ರಾಜಕಾಲುವೆಗಳನ್ನು ತೆರವುಗೊಳಿಸುತ್ತಿದ್ದೇವೆ ಎಂದು ತಿಳಿಸಿದರು. ತಿರುಗೇಟು: ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಳೆ ಬಿದ್ದು ಉಂಟಾಗಿರುವ ಅನಾಹುತ ತಡೆಯಲು ರಾಜ್ಯಸರ್ಕಾರ ವಿಫಲವಾಗಿದೆ ಎನ್ನುವಂತೆ ಕೇಂದ್ರ ಸಚಿವ ಅನಂತಕುಮಾರ್ ಆರೋಪ ಮಾಡುತ್ತಾರೆ. 5 ವರ್ಷ ಅವರೇ (ಬಿಜೆಪಿ) ಅಧಿಕಾರದಲ್ಲಿ ಇದ್ರಲ್ಲಾ ಏನು ಮಾಡಿದ್ರು? ಅವರು ರಾಜಕಾಲುವೆ ಒತ್ತುವರಿ ತೆರವು ಮಾಡಿದ್ದರೆ ಇಂತಹ ಸಮಸ್ಯೆ ಉಂಟಾಗುತ್ತಿರಲಿಲ್ಲ ಎಂದು ತಿರುಗೇಟು ನೀಡಿದರು. ಅಲ್ಲದೆ, 2018ರ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ ಅವರು, ನಿಗದಿಯಂತೆ 2018ರ ಏಪ್ರಿಲ್-ಮೇನಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನ, ಮಂಡಳಿ ಅಧ್ಯಕ್ಷರಾದ ಎಚ್.ಎ.ವೆಂಕಟೇಶ್, ಮಲ್ಲಿಗೆ ವೀರೇಶ್, ಬಿ.ಸಿದ್ದರಾಜು, ಜಿ.ವಿ.ಸೀತಾರಾಂ, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಂದಿನಿ ಚಂದ್ರಶೇಖರ್ ಇದ್ದರು.