Advertisement

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದಿಂದ ದಸರಾ ಸಂಭ್ರಮಾಚರಣೆ

03:12 PM Oct 14, 2021 | Team Udayavani |

ನವಿಮುಂಬಯಿ: ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಇದರ ಮಹಿಳಾ ವಿಭಾಗದ ವತಿಯಿಂದ ದಸರಾ ಸಂಭ್ರಮಾಚರಣೆ ಅ. 10ರಂದು ಅಪರಾಹ್ನ 2.30ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜೂಯಿ ನಗರದ ಬಂಟ್ಸ್‌ ಸಭಾಗೃಹದಲ್ಲಿ  ನೆರವೇರಿತು.

Advertisement

ಇದೇ ಸಂದರ್ಭ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಗೋಪಾಲ್‌ ಶೆಟ್ಟಿ  ನೇತೃತ್ವದಲ್ಲಿ  ನವರಾತ್ರಿ ಹಬ್ಬದ ಅಂಗವಾಗಿ ಲಲಿತಾ ಪಂಚಮಿ ಪೂಜೆಯನ್ನು ಆಯೋಜಿಸಲಾಯಿತು. ಸಮಾಜದ ಮಹಿಳೆಯರು ಲಲಿತಾ ಸಹಸ್ರನಾಮವನ್ನು ಪಠಿಸಿದರು. ಬಳಿಕ ಮಹಿಳಾ ಸದಸ್ಯೆಯರಿಂದ ಭಜನೆ, ದಾಂಡಿಯಾ ರಾಸ್‌, ಅರಸಿನ ಕುಂಕುಮ ಕಾರ್ಯಕ್ರಮ ನಡೆಯಿತು.

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷ ಮುರಳಿ ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ್‌ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಲತಾ ಗೋಪಾಲ್‌ ಶೆಟ್ಟಿ, ಉಪಾಧ್ಯಕ್ಷೆ ಲತಾ ಆರ್‌. ಶೆಟ್ಟಿ  ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅತಿಥಿಗಳಾಗಿ ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ಶೆಟ್ಟಿ, ಶ್ರೀ ಶನೀಶ್ವರ ಸೇವಾ ಸಮಿತಿ ನೆರೂಲ್‌ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸ್ವರ್ಣಾ ಡಿ. ಶೆಟ್ಟಿ, ನೆರೂಲ್‌ ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ದೇವಸ್ಥಾನದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಭಾ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು. ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ನ ಮಹಿಳಾ ಸಮಿತಿಯ ಸದಸ್ಯೆ ಸುಮತಿ ಶೆಟ್ಟಿ ಪ್ರಾರ್ಥನೆಗೈದರು.

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಇದರ ಮಹಿಳಾ ವಿಭಾಗದ ಕೋಶಾಧಿಕಾರಿ ಶಾಂತಾ ಎನ್‌. ಶೆಟ್ಟಿ, ಮಹಿಳಾ ವಿಭಾಗದ ಜತೆ ಕಾರ್ಯದರ್ಶಿ ಉಷಾ ಶೆಟ್ಟಿ ಹಾಗೂ ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Advertisement

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘಟನೆಗಳ ಮಹಿಳಾ ವಿಭಾಗದ ಸದಸ್ಯೆಯರು, ಸಮಾಜದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಮಹಿಳೆಯರು ಪರಸ್ಪರ ಅರಸಿನ ಕುಂಕುಮ ಹಚ್ಚಿಕೊಂಡು ಶುಭ ಹಾರೈಸಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next