Advertisement

ದಸರಾ ಉತ್ಸವ: ನಾಳೆಯಿಂದ ಯುವ ಸಂಭ್ರಮ; ನಟ ಡಾಲಿ ಧನಂಜಯ ಭಾಗಿ

06:02 PM Sep 15, 2022 | Team Udayavani |

ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವ ಅಂಗವಗಿ ನಗರದ ಮಾನಸಗಂಗೋತ್ರಿ ಬಯಲು ರಂಗಮಂದಿರಲ್ಲಿ ಸೆ.16ರಿಂದ 24ರವರೆಗೆ ಯುವ ಸಮಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ದಸರಾ ಯುವ ಸಂಭ್ರಮ ಉಪಸಮಿತಿ ವಿಶೇಷಾಧಿಕಾರಿ ಹಾಗೂ ಎಸ್‌ಪಿ ಆರ್‌.ಚೇತನ್‌ ಹೇಳಿದರು.

Advertisement

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಸರಾ ಮಹೋತ್ಸವದಲ್ಲಿ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪ್ರತಿಭೆಗೆ ಅನಾವ ಣರಣಕ್ಕೆ ಯುವ ಸಂಭ್ರಮ ಆಯೋಜಿಸುವ ಮೂಲಕ ವೇದಿಕೆ ಕಲ್ಪಿಸಲಾಗುತ್ತಿದೆ. ಅದರಂತೆ ಈ ಬಾರಿಯೂ ಸೆ.16ರಿಂದ ಯುವ ಸಂಭ್ರಮ ಆಯೋಜಿಸಲಾಗುತ್ತಿದೆ. ಸೆ. 16ರಂದು ಸಂಜೆ 5.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಯುವ ಸಂಭ್ರಮಕ್ಕೆ ಚಾಲನೆ
ನೀಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ನಟ ಡಾಲಿ ಧನಂಜಯ ಭಾಗವಹಿಸಲಿದ್ದಾರೆ.ಶಾಸಕ ಎಲ್‌.ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

253 ಕಾಲೇಜು ಭಾಗಿ: ಯುವ ಸಂಭ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳು ಮತ್ತು ರಾಜ್ಯದ ಇತರೆ ವಿವಿಗಳ ತಲಾ ಒಂದೊಂದು ತಂಡಗಳು ಸೇರಿ ಒಟ್ಟು 253 ತಂಡಗಳು ಕಾರ್ಯಕ್ರಮ ನೀಡಲಿವೆ. ಒಟ್ಟು 10500 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಪ್ರತಿ ತಂಡಕ್ಕೆ 10 ನಿಮಿಷಗಳ ಕಾಲಾವಕಾಶ ನೀಡಲಾಗಿದ್ದು, ಪ್ರತಿ ತಂಡದಲ್ಲಿ 30ರಿಂದ 40 ಕಲಾವಿದರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ವಿವರಿಸಿದರು.

9 ವಸ್ತು ವಿಷಯ: ಈ ಬಾರಿಯ ಯುವ ಸಂಭ್ರಮಕ್ಕೆ ಸ್ವಾತಂತ್ರ್ಯ ಅಮೃತ ಮಹೋತ್ಸವ, ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆ, ರಾಷ್ಟ್ರೀಯ ಭಾವೈಕ್ಯತೆ, ಕನ್ನಡ ಸಂಸ್ಕೃತಿ ಮತ್ತು ಜಾನಪದ ಕಲೆ, ಮಹಿಳಾ ಸಬಲೀಕರಣ, ಮಾದರಿ ಮೈಸೂರು ನಿರ್ಮಾಣಕ್ಕೆ ಅರಸರ ಕೊಡುಗೆ ಮತ್ತು ಪರಿಸರ ಸಂರಕ್ಷಣೆ ಸೇರಿ 9 ವಸ್ತುವಿಷಯಗಳನ್ನು ನೀಡಲಾಗಿದೆ. ಈ ಆಶಯಗಳನ್ನಿಟ್ಟುಕೊಂಡು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದರು.

ಯುವ ದಸರಾಗೆ 18 ತಂಡ: ಯುವ ಸಂಭ್ರಮದಲ್ಲಿ ನಿತ್ಯ 28 ತಂಡಗಳು ಪ್ರದರ್ಶನ ನೀಡಲಿದ್ದು, ಈ ವೇಳೆ ಅತ್ಯುತ್ತಮ ಪ್ರದರ್ಶನ ನೀಡಿದ 03 ತಂಡಗಳನ್ನು ನಿತ್ಯ ಆಯ್ಕೆ ಮಾಡಲಾಗುವುದು. ಒಟ್ಟು 18 ತಂಡಗಳನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಯುವ ದಸರಾದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗುವುದು. ಕಲಾವಿದರನ್ನು ಗೌರವಿಸುವುದರ ಜತೆಗೆ ಪ್ರಯಾಣ ಭತ್ಯೆ, ವಸ್ತ್ರ ವಿನ್ಯಾಸದ ಖರ್ಚುವೆಚ್ಚ ನೀಡಲಾಗುತ್ತದೆ ಎಂದು ವಿವರಿಸಿದರು.

Advertisement

ಪ್ರತಿದಿನ ಸಂಜೆ 5.30ರಿಂದ ರಾತ್ರಿ 10ರ ತನಕ ಕಾರ್ಯಕ್ರಮ ನಡೆಯಲಿದೆ. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಿದ್ದು, ಅಗತ್ಯ ಪೊಲೀಸ್‌ ಬಂದೋಬಸ್ತ್ ಹಾಗೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ ಎಂದರು. ಮುಡಾ ಕಾರ್ಯದರ್ಶಿ ವೆಂಕಟರಾಜು, ಜಿಲ್ಲಾ ಯೋಜನಾ ನಿರ್ದೇಶಕ ಅಸದ್‌ ರೆಹಮಾನ್‌ ಷರೀಫ್, ಕಲಾವಿದ ಡಾ. ನಿಂಗರಾಜು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next