Advertisement

ದಸರಾ: ರಾಷ್ಟ್ರಪತಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಆಹ್ವಾನ

10:11 PM Sep 22, 2022 | Team Udayavani |

ನವದೆಹಲಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಆಹ್ವಾನ ನೀಡಿದರು.

Advertisement

ಈ ಸಂದರ್ಭದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದರಾದ ಪ್ರತಾಪ್ ಸಿಂಹ, ಅಣ್ಣಸಾಹೇಬ ಜೊಲ್ಲೆ ಮತ್ತು ಮೈಸೂರು ಮೇಯರ್ ಶಿವಕುಮಾರ್ ಅವರು ಉಪಸ್ಥಿತರಿದ್ದರು.

ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ; ಹೆಚ್.ಡಿ.ದೇವೇಗೌಡ ಅವರಿಂದ ಸಂದೇಶ

ಸೆ.26ರಂದು ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಅಂದು ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಇದೇ ಪ್ರಥಮಬಾರಿಗೆ ರಾಷ್ಟ್ರಪತಿಗಳು ದಸರಾ ಮಹೋತ್ಸವ ಉದ್ಘಾಟನೆ ಮಾಡುತ್ತಿದ್ದಾರೆ.

ಈಗಾಗಲೇ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

Advertisement

ರಾಜ್ಯ ಹೈಕೋರ್ಟ್ ನ ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಆರಾಧೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ಸಚಿವರು, ಶಾಸಕರು ಸೇರಿದಂತೆ ಗಣ್ಯಾತಿಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next