Advertisement

ಏಪ್ರಿಲ್‌ನಿಂದಲೇ ದಸರಾ ಸಿದ್ಧತೆ

11:16 AM Feb 21, 2020 | Team Udayavani |

ಬೆಂಗಳೂರು: ಅಕ್ಟೋಬರ್‌ನಲ್ಲಿ ನಡೆಯುವ ನಾಡಹಬ್ಬ ಮೈಸೂರು ದಸರಾಕ್ಕೆ ದೇಶ-ವಿದೇಶಿಗರನ್ನು ಆಕರ್ಷಿಸಲು ಏಪ್ರಿಲ್‌ ತಿಂಗಳಿನಿಂದ ಸಿದ್ಧತೆ ಆರಂಭಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.

Advertisement

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಗುರುವಾರ ಎಫ್ಕೆಸಿಸಿಐ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಂವಾದ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ದಸರಾ ವಿಶ್ವ ಮಟ್ಟದಲ್ಲಿಯೇ ಹೆಸರುವಾಸಿಯಾಗಿದ್ದು, ಹಬ್ಬ 1 ತಿಂಗಳು ಇರುವಾಗ ಪ್ರಚಾರ ಕಾರ್ಯ ಆರಂಭಿಸಿದರೆ, ವಿದೇಶಿಗರಿಗೆ ವೀಸಾ ಸಮಸ್ಯೆ ಎದುರಾಗುತ್ತದೆ. ಆದ್ದರಿಂದ ಏಪ್ರಿಲ್‌ ತಿಂಗಳಿನಿಂದಲೇ ಪ್ರಚಾರ ಕಾರ್ಯ ಆರಂಭಿಸಲಾಗುವುದು. ದಸರಾ ಪ್ರಾಧಿಕಾರ ರಚನೆ ಸಂಬಂಧಿಸಿ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಬಳಿ ಚರ್ಚಿಸಲಾಗಿದ್ದು, ಇನ್ನು ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ 319 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು, ಪ್ರತಿ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ಪ್ರವಾಸಿ ತಾಣಗಳ ಸುಸ್ಥಿರ ಅಭಿವೃದ್ಧಿ ಆಗುತ್ತಿಲ್ಲ. ಆದ್ದರಿಂದ ವರ್ಷಕ್ಕೆ 5 ಪ್ರವಾಸಿ ತಾಣಗಳಿಗೆ ಶೇ.100ರಷ್ಟು ಅನುದಾನ ನೀಡಿ ಅಭಿವೃದ್ಧಿ ಪಡಿಸಿದರೆ ಪ್ರವಾಸಿಗಳ ಸಂಖ್ಯೆ ಹೆಚ್ಚಾಗುತ್ತದೆ. ಇದರಿಂದ ಸರ್ಕಾರಕ್ಕೆ ಆದಾಯ, ಸ್ಥಳೀಯರಿಗೆ ಉದ್ಯೋಗ ಸಿಗಲಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಬಳಿ ಚರ್ಚಿಸಲಾಗಿದೆ ಎಂದರು.

ಎಫ್ಕೆಸಿಸಿಐ ಅಧ್ಯಕ್ಷ ಸಿ.ಆರ್‌. ಜನಾರ್ಧನ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಸ್ಥಳೀಯ ಪ್ರವಾಸಿ ತಾಣಗಳ ವಿವರಗಳನ್ನೊಳಗೊಂಡ ಕಿಯಾಸ್ಕ್ಗಳನ್ನು ಸ್ಥಾಪಿಸಿ, ಪ್ರವಾಸಿ ನಕ್ಷೆಯನ್ನು ಪ್ರದರ್ಶಿಸಬೇಕು. ಬನ್ನೇರುಘಟ್ಟ ನ್ಯಾಷನಲ್‌ ಪಾರ್ಕ್ ನಲ್ಲಿ ನೈಟ್‌ ಸಫಾರಿ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next