Advertisement

ಗ್ರಾಮೀಣರಿಗೆ ದಸರಾ ಕ್ರೀಡಾಕೂಟ ಸಹಕಾರಿ

06:01 PM Aug 19, 2022 | Team Udayavani |

ಚಾಮರಾಜನಗರ: ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ದಸರಾ ಕ್ರೀಡಾಕೂಟ ಸಹಕಾರಿ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

Advertisement

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಚಾಮರಾಜನಗರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಗುಂಡು ಎಸೆದು ಚಾಲನೆ ನೀಡಿ ಮಾತನಾಡಿದರು.

ಚಾಮರಾಜನಗರ ಜಿಲ್ಲೆಯು ಹಿಂದೆ ಮೈಸೂರು ಜಿಲ್ಲೆಗೆ ಒಳಪಟ್ಟಿತ್ತು. ಈಗ ಪ್ರತ್ಯೇಕ ಜಿಲ್ಲೆಯಾಗಿ 25 ವರ್ಷ ಕಳೆದಿದೆ. 2014 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಮೈಸೂರು ದಸರಾ ಸಂಬಂಧ ಜಿಲ್ಲೆಯಲ್ಲಿಯೂ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲು 1 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು ಎಂದರು.ಈ ಬಾರಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಜಿಲ್ಲೆಯಲ್ಲಿ ಅದ್ಧೂರಿ ದಸರಾ ಆಚರಣೆ ಮಾಡಲು 1 ಕೋಟಿ ಅನುದಾನ ಬಿಡುಗಡೆ ಮಾಡಿದ್ದು ಈಗಾಗಲೇ ಸಕಲ ಸಿದ್ಧತೆಗಳು ನಡೆಯುತ್ತಿವೆ.

ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಯಾವುದೇ ರೀತಿಯ ಅಹಿತಕರ ಘಟನೆಗೆ ಆಸ್ಪದ ನೀಡದಂತೆ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷೆ ಪಿ.ಸುಧಾ, ಕ್ರೀಡಾ ಇಲಾಖೆಯ ಅನಿತಾ ಸೇರಿದಂತೆ ದೈಹಿಕ ಶಿಕ್ಷಕರು, ಕ್ರೀಡಾಪಟುಗಳು ಇದ್ದರು.

ಕುಡಿಯುವ ನೀರಿಲ್ಲದೇ ಬಳಲಿದ ಕ್ರೀಡಾಪಟುಗಳು
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಚಾಮರಾಜನಗರ ತಾಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಕ್ರೀಡಾಪಟುಗಳು ಭಾಗವಹಿಸಿದ್ದರು. ಆದರೆ, ಕ್ರೀಡಾಪಟುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿರಲಿಲ್ಲ. ಇದರಿಂದ ಕ್ರೀಡಾಪಟುಗಳು ಬಿಸಿಲಿನ ತಾಪಕ್ಕೆ ಬಳಲಿ ಸುಸ್ತಾದರು. ಅಲ್ಲದೇ ಕುಡಿಯುವ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿಯೂ ಕಂಡುಬಂದಿತು. ಬಾಯಾರಿಕೆಯನ್ನು ನೀಗಿಸಿಕೊಳ್ಳಲು ಐಸ್‌ಕ್ರೀಂ, ಹಣ ನೀಡಿ ನೀರಿನ ಬಾಟಲಿ ಖರೀದಿಸುತ್ತಿದ್ದ
ದೃಶ್ಯ ಕಂಡುಬಂದಿತು. ನೀರಿನ ವ್ಯವಸ್ಥೆ ಮಾಡದ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರೀಡಾಪಟುಗಳು ಹಿಡಿಶಾಪ ಹಾಕಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next