Advertisement

Dasara: ಎರಡು ಸಾವಿರ ಹೆಚ್ಚುವರಿ ಬಸ್‌

12:08 AM Oct 06, 2024 | Team Udayavani |

ಬೆಂಗಳೂರು: ದಸರಾ ಹಬ್ಬದ ಅಂಗವಾಗಿ ಕೆಎಸ್ಸಾರ್ಟಿಸಿ ಅ. 9ರಿಂದ 12ರ ವರೆಗೆ ರಾಜ್ಯ ಹಾಗೂ ಅ.13ರಿಂದ 14ರ ವರೆಗೆ ಹೊರ ರಾಜ್ಯದ ಹಲವು ಸ್ಥಳಗಳಿಗೆ ಹೆಚ್ಚುವರಿಯಾಗಿ 2000 ಬಸ್‌ಗಳನ್ನು ನಿಗದಿಮಾಡಿದೆ. ಈ ಬಸ್‌ಗಳು ಕೆಂಪೇಗೌಡ, ಮೈಸೂರು ರಸ್ತೆ ಮತ್ತು ಶಾಂತಿನಗರದ ಬಿಎಂಟಿಸಿ ಬಸ್‌ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಿದೆ.

Advertisement

ಪ್ರಸ್ತುತ ಸಾರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಸ್‌ಗಳ ಜತೆ ಹೆಚ್ಚುವರಿ ಬಸ್‌ ಕಾರ್ಯನಿರ್ವಹಿಸಲಿದೆ. ಮೈಸೂರು ದಸರಾ ವೀಕ್ಷಣೆಯ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ಮೈಸೂರಿಗೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸಲು 400 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 660 ದಸರಾ ವಿಶೇಷ ವಾಹನಗಳನ್ನು ನಿಯೋಜಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next