Advertisement

ಹೊಸ ಡಿಸಿ ಅಧಿಕಾರ ಸ್ವೀಕಾರ

10:28 AM Aug 21, 2019 | Naveen |

ದಾವಣಗೆರೆ: ನೂತನ ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.

Advertisement

ಬೆಳಿಗ್ಗೆ ಕಚೇರಿಗೆ ಆಗಮಿಸಿದ ಅವರನ್ನು ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಪುಷ್ಪ ಗುಚ್ಛ ನೀಡಿ ಸ್ವಾಗತಿಸಿದರು. ಈ ಹಿಂದೆ ದಾವಣಗೆರೆ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಅವರು ಬೀದರ್‌ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನೂತನ ಜಿಲ್ಲಾಧಿಕಾರಿಯನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಬಸವರಾಜ್‌ ಸಹ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

ಹೊಸ ಡಿಸಿ ಪರಿಚಯ: ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ 1974ರ ಮಾರ್ಚ್‌ 27ರಂದು ಜನಿಸಿರುವ ಮಹಾಂತೇಶ್‌ ಬೀಳಗಿ, ಪ್ರಾಥಮಿಕ ಶಿಕ್ಷಣದಿಂದ ಪದವಿ ವರೆಗೂ ಅಲ್ಲಿಯೇ ವ್ಯಾಸಂಗ ಮಾಡಿದ್ದಾರೆ. ಇಂಗ್ಲಿಷ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು ನಾಲ್ಕು ವರ್ಷಗಳ ಕಾಲ ಹುಬ್ಬಳ್ಳಿ, ಧಾರವಾಡದಲ್ಲಿನ ವಿವಿಧ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. 1998ರಲ್ಲಿ ಖಜಾನೆ ಅಧಿಕಾರಿಯಾಗಿ ಸರ್ಕಾರಿ ಸೇವೆಗೆ ಸೇರಿದ ಅವರು, 1998ರಲ್ಲಿ ಮತ್ತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ರ್‍ಯಾಂಕ್‌ ಪಡೆದ ಸಹಾಯಕ ಆಯುಕ್ತರಾಗಿ ಆಯ್ಕೆಯಾದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಕೆಲಸ ಆರಂಭಿಸಿ, ಧಾರವಾಡ ಸಹಾಯಕ ಆಯುಕ್ತರಾಗಿ ಮೂರು ವರ್ಷ ಕಾರ್ಯ ನಿರ್ವಹಿಸಿದ್ದಾರೆ. ನಂತರ ಸಿಡಿಬಿನಲ್ಲಿ ಒಂದು ವರ್ಷ ಸೇವೆ ಸಲ್ಲಿಸಿ, ದಾವಣಗೆರೆ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದರು. ಕೆಯುಐಡಿಎಫ್‌ಸಿನಲ್ಲಿ ಉಪಯೋಜನಾ ನಿರ್ದೇಶಕರಾಗಿ, ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಹಾಗೂ ಬೀದರ್‌ ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಕಾರ್ಯನಿರ್ವಹಿಸಿರುವ ಮಹಾಂತೇಶ್‌ ಬೀಳಗಿ ಈಗ ದಾವಣಗೆರೆ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next