ಬೆಂಗಳೂರು: ಮಂಡ್ಯ ಜಿಲ್ಲೆಯ ರೈತರ ಬೆಳೆಗಳಿಗೆ ಕೆಆರ್‌ಎಸ್ ಡ್ಯಾಂನಿಂದ 2 ಟಿಎಂಟಿ ನೀರು ಬಿಡುವಂತೆ ಕೋರಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಕಾವೇರಿ ಜಲ ನಿರ್ವಹಣಾ ಮಂಡಳಿ ಅಧ್ಯಕ್ಷ ಮಸೂದ್ ಹುಸೇನ್ ಹಾಗೂ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಕಾವತ್ ರವರಿಗೆ ಪತ್ರ ಬರೆದಿದ್ದಾರೆ.
ಮಂಡ್ಯ ಜಿಲ್ಲೆ ಮಳೆಯ ಅಭಾವ ಎದುರಿಸುತ್ತಿದ್ದು ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಕುರಿತು ಸಂಸದೆ ಸುಮಲತಾ ಅಂಬರೀಶ್ ಹಾಗೂ ರಾಜ್ಯ ಸರ್ಕಾರದ ಸಚಿವರಾದ ಸಿ.ಎಸ್ ಪುಟ್ಟರಾಜು ಕೂಡ ಚರ್ಚಿಸಿದ್ದಾರೆ. ಹೀಗಾಗಿ ರೈತರ ಬೆಳೆಗಳಿಗೆ ಅನುಕೂಲವಾಗುವಂತೆ ತತ್‌ಕ್ಷಣ ಕೆಆರ್‌ಎಸ್ ಅಣೆಕಟ್ಟಿನಿಂದ ಎರಡು ಟಿಎಂಸಿ ನೀರು ಬಿಡಲು ಅಗತ್ಯ ಕ್ರಮವಹಿಸಿ ಎಂದು ಸದಾನಂದಗೌಡ ಪತ್ರದಲ್ಲಿ ಕೋರಿದ್ದಾರೆ.
Advertisement