ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಬೈಪಾಸ್ 30 ಕಿಮೀ ರಸ್ತೆಯನ್ನು ಷಟ್ಪಥ ರಸ್ತೆಯನ್ನಾಗಿ ಮಾರ್ಪಡಿಸಲು ಕೂಡಲೇ ಟೆಂಡರ್ ಕರೆಯುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೂಚನೆ ನೀಡಿದ್ದಾರೆ.
ಶುಕ್ರವಾರ ನವದೆಹಲಿಯಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪುಣೆ-ಬೆಂಗಳೂರು ಹೆದ್ದಾರಿ ಮಾರ್ಗದಲ್ಲಿನ ಹು-ಧಾ ಬೈಪಾಸ್ ರಸ್ತೆ ಅಗಲೀಕರಣ ಅವಶ್ಯಕತೆ ಕುರಿತು ಚರ್ಚಿಸಲಾಯಿತು. ಈ ಮಾರ್ಗದ ನಿರ್ವಹಣೆ ಮಾಡುತ್ತಿರುವ ನಂದಿ ಹೈವೇ ಕಂಪೆನಿ ಸಹಯೋಗದೊಂದಿಗೆ ಆರು ಪಥದ ಮುಖ್ಯರಸ್ತೆ ಹಾಗೂ ಎರಡು ಬದಿಯಲ್ಲಿ ಸರ್ವೀಸ್ ರಸ್ತೆ ನಿರ್ಮಿಸಲು ಸೂಚನೆ ನೀಡಲಾಯಿತು.
ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಸಾರ್ವಜನಿಕರ ಅವಶ್ಯಕತೆಗೆ ತಕ್ಕಂತೆ ಆರ್‌ಒಬಿ, ಆರ್‌ಯುಬಿ ಸೇರಿಸಲು ಸೂಚನೆ ನೀಡಲಾಗಿದ್ದು, ರಸ್ತೆ ಅಗಲೀಕರಣಕ್ಕೆ 33 ಹೆಕ್ಟೇರ್ ಭೂಮಿ ಸ್ವಾಧೀನ ಅವಶ್ಯವಾಗಿದೆ. ಭೂಮಿ ಸ್ವಾ ಧೀನ ಪಡಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ಪ್ರಾ ಧಿಕಾರಕ್ಕೆ ಹಸ್ತಾಂತರಿಸಲು ಸಂಬಂ ಧಿಸಿದ ಅ ಧಿಕಾರಿಗಳಿಗೆ ಸೂಚಿಸಲಾಗಿದೆ. ರಸ್ತೆ ಅಗಲೀಕರಣ ಕಾಮಗಾರಿ ಆರಂಭದ ನಂತರ ಯಾವು ದೇ ಅಡೆತಡೆ ಬಾರದಂತೆ ಎಲ್ಲ ರೀತಿಯ ಒಡಂಬಡಿಕೆ ಮಾಡಿಕೊಳ್ಳುವಂತೆ ಅಧಿ ಕಾರಿಗಳಿಗೆ ಹೇಳಲಾಗಿದೆ. ಈ ಕುರಿತಾಗಿ ಜುಲೈನಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಹು-ಧಾ ಬೈಪಾಸ್ ರಸ್ತೆಯನ್ನು ಷಟ್ಪಥ ರಸ್ತೆಯಾಗಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.
ಅಂದಾಜು 1,200 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಗಲೀಕರಣ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದು, ಇದೀಗ ಕೇಂದ್ರ ಭೂ ಸಾರಿಗೆ ಸಚಿವರು ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಯೋಜನೆ ಅನುಷ್ಠಾನಕ್ಕೆ ಚಾಲನೆ ದೊರೆತಂತಾಗಿದೆ.
ಸಭೆಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ಸಂಸದರಾದ ಶಿವಕುಮಾರ ಉದಾಸಿ, ಜಿ.ಎಂ. ಸಿದ್ದೇಶ್ವರ, ಪಿ.ಸಿ.ಗದ್ದಿಗೌಡ, ನಳೀನ್‌ಕುಮಾರ್ ಕಟೀಲ್, ರಾಷ್ಟ್ರೀಯ ಹೆದ್ದಾರಿ ಇಲಾಖೆ ಕಾರ್ಯದರ್ಶಿ, ರಾಜ್ಯ ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಚೇರ್ಮನ್, ಧಾರವಾಡ ಜಿಲ್ಲಾಧಿಕಾರಿ, ಹು-ಧಾ ಮಹಾನಗರ ಪೊಲೀಸ್ ಆಯುಕ್ತ, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಇನ್ನಿತರೆ ಅಧಿಕಾರಿಗಳು ಪಾಲ್ಗೊಂಡಿದ್ದರೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಕಚೇರಿ ಪ್ರಕಟಣೆ ತಿಳಿಸಿದೆ.