Advertisement

“ಜಂಟಲ್‍ಮ್ಯಾನ್‌’ಲುಕ್‍ನಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್: Watch

04:18 PM Jul 09, 2018 | |

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ “ಜಂಟಲ್‍ಮ್ಯಾನ್‌’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಚಿತ್ರವನ್ನು ಜಡೇಶ್‌ ಕುಮಾರ್ ಹಂಪೆ ನಿರ್ದೇಶಿಸುತ್ತಿದ್ದಾರೆ. “ಸಾಮಾನ್ಯವಾಗಿ ಮನುಷ್ಯ ದಿನವೊಂದಕ್ಕೆ ಏಳೆಂಟು ಗಂಟೆ ನಿದ್ದೆ ಮಾಡಿದರೆ, ಸ್ಲಿಪಿಂಗ್‌ ಬ್ಯೂಟಿ ಸಿಂಡ್ರೋಮ್‌ನಿಂದ ಬಳಲುತ್ತಿರುವವರು ಏಳೆಂಟು ಗಂಟೆ ಮಾತ್ರ ಎದ್ದಿದ್ದು, ಮಿಕ್ಕಂತೆ ಉಳಿದ ಕಾಲ ನಿದ್ದೆಗೆ ಜಾರಿರುತ್ತಾರೆ.

Advertisement

ಎದ್ದಿರುವ ಸಮಯದಲ್ಲಿ ಅವರು ಏನೆಲ್ಲಾ ಮಾಡಬಲ್ಲರು. ಇಲ್ಲಿ ನಾಯಕ ಸಹ ಅಂಥದ್ದೇ ಒಂದು ಸಿಂಡ್ರೋಮ್‌ನಿಂದ ಬಳಲುತ್ತಿರುತ್ತಾನೆ. ಇಲ್ಲಿ ನಾಯಕನ ಪಾತ್ರವನ್ನು ಕುಂಭಕರ್ಣನನ್ನು ಮೂಲವಾಗಿಟ್ಟುಕೊಂಡು ಕಥೆ ಮಾಡಲಾಗಿದೆ. ಕುಂಭಕರ್ಣನನ್ನ ಎಬ್ಬಿಸೋದು ಕಷ್ಟ.

ಎಬ್ಬಿಸಿದ ಮೇಲೆ ಹಿಡಿಯುವುದು ಕಷ್ಟ. ಇಲ್ಲಿ ನಾಯಕ ಎದ್ದಿರುವ ಏಳೆಂಟು ಗಂಟೆ ಸಮಯದಲ್ಲಿ ತನ್ನ ಎಲ್ಲಾ ಶಕ್ತಿ ಮತ್ತು ಬುದ್ಧಿಯನ್ನು ಹೇಗೆ ಪ್ರದರ್ಶನ ಮಾಡುತ್ತಾನೆ ಎನ್ನುವುದನ್ನು ಥ್ರಿಲ್ಲಿಂಗ್‌ ಆಗಿ ಹೇಳುವ ಪ್ರಯತ್ನವನ್ನು ಮಾಡಲಾಗಿದೆ.

ಚಿತ್ರಕ್ಕೆ ರವಿ ಬಸ್ರೂರು ಅವರು ಸಂಗೀತ ಸಂಯೋಜಿಸುತ್ತಿದ್ದು, ಈಗಾಗಲೇ ಕೆಲಸ ಶುರು ಮಾಡಿಕೊಂಡಿದ್ದಾರೆ. ಇನ್ನು ಕೆ.ಎಂ. ಪ್ರಕಾಶ್‌ ಅವರ ಸಂಕಲನ ಈ ಚಿತ್ರಕ್ಕಿದ್ದು, ನಿರ್ಮಾಣದ ಜವಾಬ್ದಾರಿಯನ್ನು ಗುರುದೇಶಪಾಂಡೆ ಹೊತ್ತಿದ್ದಾರೆ. ಅಲ್ಲದೇ ಚಿತ್ರಕ್ಕೆ ನಾಯಕಿ ಮತ್ತು ಉಳಿದ ಕಲಾವಿದರ ಆಯ್ಕೆ ಇನ್ನಷ್ಟೇ ಆಗಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next