Advertisement
ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಇಂದು ವಿಜಯ ಸಂಕಲ್ಪ ಸಮಾವೇಶದ ಅಂಗವಾಗಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಆಯ್ಕೆಗೆ ಮೊದಲೇ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ- ಶಿವಕುಮಾರ್ ನಡುವೆ ಕಿತ್ತಾಟ ನಡೆದಿದೆ ಎಂಬುದನ್ನು ಮತದಾರರು ನೆನಪಿನಲ್ಲಿ ಇಡಬೇಕು ಎಂದು ಮನವಿ ಮಾಡಿದರು.
Related Articles
Advertisement
ಕಾಶ್ಮೀರ ನಮ್ಮದಲ್ಲವೇ? 370 ನೇ ವಿಧಿ ರದ್ದು ಮಾಡಿದ್ದು ಸರಿಯಲ್ಲವೇ ಎಂದು ಕೇಳಿದ ಅವರು, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು 370ನೇ ವಿಧಿ ರದ್ದು ಮಾಡುವುದಕ್ಕೆ ವಿರೋಧ ಸೂಚಿಸಿದ್ದವು. ರಕ್ತದ ಹೊಳೆ ಹರಿದೀತೆಂದು ಎಚ್ಚರಿಸಿದ್ದವು. ಆದರೆ, ಮೋದಿಜಿ ಅವರು 370ನೇ ವಿಧಿ ರದ್ದು ಮಾಡಿ ಕಾಶ್ಮೀರವನ್ನು ನಮ್ಮದಾಗಿ ಪ್ರಕಟಿಸಿದರು ಎಂದು ವಿವರಿಸಿದರು.
ಮೋದಿಜಿ, ಯಡಿಯೂರಪ್ಪ ಅವರ ಮೇಲೆ ಭರವಸೆ ಇಡಿ. ಭ್ರಷ್ಟಾಚಾರ ಮುಕ್ತ, ದಕ್ಷಿಣ ಭಾರತದ ನಂಬರ್ ಒನ್ ಅಭಿವೃದ್ಧಿ ಹೊಂದಿದ ರಾಜ್ಯವಾಗಿ ಕರ್ನಾಟಕವನ್ನು ಮಾಡಲಿದ್ದೇವೆ ಎಂದು ತಿಳಿಸಿದರು. ಬಿಜೆಪಿ ಅಪಾರ ಜನಬೆಂಬಲ ಪಡೆದಿದೆ ಎಂಬುದಕ್ಕೆ ಇಲ್ಲಿ ಸೇರಿದ ಜನರೇ ಸಾಕ್ಷಿ ಎಂದ ಅವರು, ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಆಡಳಿತದಲ್ಲಿ ಭ್ರಷ್ಟಾಚಾರ ಗರಿಷ್ಠ ಪ್ರಮಾಣದಲ್ಲಿತ್ತು. ಇವರೆಡೂ ಕುಟುಂಬವಾದದ ಪಕ್ಷಗಳು. ಅವು ಜನರ ಅಭಿವೃದ್ಧಿ ಮಾಡುವುದಿಲ್ಲ ಎಂದು ಟೀಕಿಸಿದರು.
ಜೆಡಿಎಸ್‍ಗೆ ನೀಡಿದ ಪ್ರತಿ ಮತವೂ ಕಾಂಗ್ರೆಸ್‍ಗೆ ಹೋಗಲಿದೆ. ಕಾಂಗ್ರೆಸ್‍ಗೆ ಮತ ಕೊಟ್ಟರೆ ಅದು ಪಕ್ಷ, ಸರಕಾರವನ್ನು ಹೈಕಮಾಂಡಿನ ಎಟಿಎಂ ಮಾಡುವ ಸಿದ್ದರಾಮಯ್ಯರಿಗೆ ಹೋಗಲಿದೆ. ಆದ್ದರಿಂದ ದೇಶದ ಒಳಿತಿಗೆ ಮತ್ತು ಅಭಿವೃದ್ಧಿಗೆ ಕೆಲಸ ಮಾಡುವ ಬಿಜೆಪಿಯನ್ನೇ ಬೆಂಬಲಿಸಿ ಎಂದು ವಿನಂತಿಸಿದರು.
ಹಿರಿಯ ನೇತಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಈ ಪರಿಸರದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು. ಕೇಂದ್ರ- ರಾಜ್ಯದ ಜನಪರ ಯೋಜನೆಗಳನ್ನು ಗಮನಿಸಿ ಮತ ಕೊಡಿ. ಪಕ್ಷವು 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ಬಿ.ಶ್ರೀರಾಮುಲು ಅವರು ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆದು ಬಿಜೆಪಿಗೆ ಅಧಿಕಾರ ಕೊಡಿ ಎಂದು ವಿನಂತಿಸಿದರು.
ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಸಂಸದರಾದ ದೇವೇಂದ್ರಪ್ಪ, ಕರಡಿ ಸಂಗಣ್ಣ, ಪಕ್ಷದ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.