Advertisement
ಜಿಲ್ಲೆಯಲ್ಲಿ ಹಸಿರು ಪಟಾಕಿಯ ಬದಲಿಗೆ ಸಾಮಾನ್ಯ ಪಟಾಕಿಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ರವಿಶಂಕರ್ ಹಾಗೂ ಚಿಕ್ಕಬಳ್ಳಾಪುರ ತಹಶೀಲ್ದಾರ್ ನಾಗಪ್ರಶಾಂತ್ ಜಂಟಿಯಾಗಿ ಪಟಾಕಿ ಅಂಗಡಿಗಳ ಮೇಲೆ ದಾಳಿ ನಡೆಸಿ ಪಟಾಕಿಯನ್ನು ಪರಿಶೀಲಿಸಿ ಬೇರೆ ಪಟಾಕಿ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿ ಸುಮಾರು 10 ಬಾಕ್ಸ್ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
Related Articles
Advertisement
ಜಿಲ್ಲಾ ಎಸ್ಪಿ ಭೀತಿ: ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ದಿಡೀರ್ ಭೇಟಿ ನೀಡಲಿದ್ದಾರೆ ಜೊತೆಗೆ ಜಿಲ್ಲಾಧಿಕಾರಿಗಳು ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿಗಳನ್ನು ಮಾರಾಟ ಮಾಡಿದರೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸುವುದಾಗಿ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಬೆಳಿಗ್ಗೆ ಕೆಲವೊಂದು ಪಟಾಕಿ ಅಂಗಡಿಗಳನ್ನು ಮುಚ್ಚಲಾಗಿತ್ತು ಬಳಿಕ ತೆರೆದು ವ್ಯಾಪಾರ ಮಾಡಿದ್ದಾರೆ ಒಟ್ಟಾರೇ ಹಸಿರು ಪಟಾಕಿಯ ಬದಲಿಗೆ ಮಾಮೂಲಿ ಪಟಾಕಿ ಸಿಡಿಸಿ ದೀಪಾವಳಿ ಹಬ್ಬವನ್ನು ಆಚರಿಸುತ್ತಿರುವುದು ವಿಶೇಷವಾಗಿದೆ.
ಈ ಸಂದರ್ಭದಲ್ಲಿ ನಗರ ಪೋಲಿಸ್‍ಠಾಣೆಯ ಪಿಎಸ್‍ಐ ಹೊನ್ನೇಗೌಡ ಮತ್ತು ಸಿಬ್ಬಂದಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.