Advertisement

Dysp M.K.Ganapathi Suside Case: ಕೆ.ಜೆ. ಜಾರ್ಜ್‌ಗೆ ಸುಪ್ರೀಂ ಕ್ಲೀನ್‌ಚಿಟ್‌

12:06 AM Aug 28, 2024 | Team Udayavani |

ಹೊಸದಿಲ್ಲಿ: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರಿಗೆ ಸುಪ್ರೀಂ ಕೋರ್ಟ್‌ ಕ್ಲೀನ್‌ಚಿಟ್‌ ನೀಡಿದೆ. ಸಿಬಿಐ ಕ್ಲೀನ್‌ಚಿಟ್‌ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ವಜಾ ಮಾಡಿದೆ.

Advertisement

ಸಿಬಿಐ ಆದೇಶವನ್ನು ಪ್ರಶ್ನಿಸಿ ಗಣಪತಿ ಅವರ ಸೋದರಿ ಸಬಿತಾ ಹಾಗೂ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ| ಬೇಲಾ ಎಂ. ತ್ರಿವೇದಿ ಮತ್ತು ನ್ಯಾ| ಸತೀಶ್‌ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ ವಜಾಗೊಳಿಸಿದೆ. ಗಣಪತಿ ಅವರ ಆತ್ಮಹತ್ಯೆಗೆ ಸಚಿವ ಜಾರ್ಜ್‌, ಅಧಿಕಾರಿಗಳಾದ ಎಂ.ಎಂ. ಪ್ರಸಾದ್‌ ಮತ್ತು ಪ್ರಣವ್‌ ಮೊಹಂತಿ ಕಾರಣ ಎಂದು ಆರೋಪಿಸಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಸಿಬಿಐ ಈ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಬಿ ರಿಪೋರ್ಟ್‌ ಸಲ್ಲಿಸಿತ್ತು.

ಆದರೆ ಸಿಬಿಐ ವರದಿಯನ್ನು ತಿರಸ್ಕರಿಸಿದ್ದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರ್ಜ್‌ ಹಾಗೂ ಐಪಿಎಸ್‌ ಅಧಿಕಾರಿಗಳಿಗೆ ಸಮನ್ಸ್‌ ನೀಡಿತ್ತು. ಈ ಆದೇಶವನ್ನು ಹೈಕೋರ್ಟ್‌ ವಜಾಗೊಳಿಸಿತ್ತು. ಪಶ್ಚಿಮ ವಲಯ (ಮಂಗಳೂರು) ಐಜಿಪಿ ಕಚೇರಿಯಲ್ಲಿ ಡಿವೈಎಸ್‌ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಣಪತಿ ಅವರು 2016ರ ಜು. 7ರಂದು ಮಡಿಕೇರಿಯ ಲಾಡ್ಜ್ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೂ ಮೊದಲು ಆಗ ಗೃಹಸಚಿವರಾಗಿದ್ದ ಕೆ.ಜೆ. ಜಾರ್ಜ್‌ ಹಾಗೂ ಐಪಿಎಸ್‌ ಅಧಿಕಾರಿಗಳಾದ ಪ್ರಸಾದ್‌ ಮತ್ತು ಮೊಹಾಂತಿ ತನಗೆ ಕಿರುಕುಳ ನೀಡಿದ್ದರು ಎಂದು ಟೀವಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next