Advertisement

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

12:01 PM Nov 15, 2024 | Team Udayavani |

ಬೆಂಗಳೂರು: ಇ-ಖಾತಾ ವ್ಯವಸ್ಥೆಯಲ್ಲಿ ಆಗಿರುವ ಗೊಂದಲದಿಂದ ಲಂಚಬಾಕತನಕ್ಕೆ ದಾರಿ ಮಾಡಿಕೊಟ್ಟಂತಾಗಿದೆ. ಇದನ್ನು ಸರಕಾರ ಸರಳಗೊಳಿಸಬೇಕು. ಯಾವುದೇ ಲಂಚವಿಲ್ಲದೆ ಜನರು ಸುಲಭವಾಗಿ ಸೇವೆ ಪಡೆಯುವಂತಾಗಬೇಕು ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

Advertisement

ಸರಕಾರ ಇ-ಖಾತಾ ಮಾಡುವ ಮುನ್ನ ಮಾಹಿತಿ ಪಡೆಯಬೇಕಿತ್ತು. ಇದಕ್ಕೆ ಬೇಕಾದ ದಾಖಲೆಗಳು ಯಾವುವು, ಯಾವ ವಿಭಾಗದಲ್ಲಿ ಎಷ್ಟು ಮಾಡಬಹುದು ಎಂದು ಆಲೋಚಿಸಬೇಕಿತ್ತು. ಏಕಾಏಕಿ ಇ-ಖಾತಾ ಮಾಡಿರುವುದರಿಂದ ಜನರಿಗೆ ತೊಂದರೆಯಾಗಿದೆ ಎಂದರು. ಈಗಾಗಲೇ ಅಪ್‌ಲೋಡ್‌ ಮಾಡಿರುವ ಇ-ಖಾತಾಗಳಲ್ಲಿ ಮಾಲೀಕರ ಹೆಸರು, ಭೂಮಿಯ ಅಳತೆಯಲ್ಲಿ ತಪ್ಪಾಗಿದೆ. ಆಸ್ತಿ ವಿವರ ಸರಿಯಾಗಿ ಸಿಗುತ್ತಿಲ್ಲ. ಬಹುಮಾಲಕತ್ವ, ಎನ್‌ಆರ್‌ಐ ಮಾಲಕತ್ವದ ಆಸ್ತಿಗೆ ಅದವಿತ್‌ ಮಾಡಬೇಕಿದೆ. ಈ ಯಾವ ಕೆಲಸಗಳೂ ಆಗಿಲ್ಲ ಎಂದು ಆರೋಪಿಸಿದರು.

ಜನರಿಗೆ ಮನೆ ಸಾಲ ಸಿಗಲು ಇ-ಖಾತಾ ಬೇಕಾಗುತ್ತದೆ. ದಿನಕ್ಕೆ ಕೇವಲ 5ರಿಂದ 6ರಷ್ಟು ಇ-ಖಾತಾ ಮಾಡಲಾಗುತ್ತಿದೆ. ಸರಕಾರ ಲಂಚಕ್ಕೆ ಅವಕಾಶ ನೀಡಿ, ಜನರಿಗೆ ತೊಂದರೆ ನೀಡುತ್ತಿದೆ. ಯಾವುದೇ ಲಂಚವಿಲ್ಲದೆ ಇ ಖಾತಾ ವರ್ಗಾವಣೆಯಾಗಬೇಕು. ನಾನು ಕಂದಾಯ ಸಚಿವನಾಗಿದ್ದಾಗ ಶುಲ್ಕ ಕಡಿಮೆ ಮಾಡಿದ್ದೆ. ಈಗಿನ ಸರಕಾರ ಮುದ್ರಾಂಕ ಶುಲ್ಕವನ್ನು ಶೇ. 200ರಿಂದ 250ಕ್ಕೆ ಹೆಚ್ಚಿಸಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next