Advertisement
ಈ ಕುರಿತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ನ್ಯಾಯಮೂರ್ತಿ ಅರವಿಂದಕುಮಾರ, ವಿಡಿಯೋ ಕಾನ್ಫೆರೆನ್ಸ್ ಸುದ್ದಿಗೋಷ್ಠಿ ಮೂಲಕ ವಿವರ ನೀಡಿದರು. ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಇತ್ಯರ್ಥವಾಗದ ಲೋಕ ಅದಾಲತ್ ಪ್ರಕರಣಗಳನ್ನು ಸೆ. 19ರಂದು ನಡೆಯುವ ಮೆಗಾ ಇ-ಲೋಕ ಅದಾಲತ್ ಮೂಲಕ ಇತ್ಯರ್ಥಗೊಳಿಸಲು ಅವಕಾಶವಿದೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ 6 ತಿಂಗಳುಗಳ ಕಾಲ ನ್ಯಾಯಾಲಯದಲ್ಲಿ ಲೋಕ ಅದಾಲತ್ ಮೂಲಕ ಯಾವುದೇ ರೀತಿಯ ಪ್ರಕರಣಗಳು ಇತ್ಯರ್ಥಪಡಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಕಕ್ಷಿದಾರರು ನ್ಯಾಯಾಲಯಕ್ಕೆ ಬರದೇ ಮನೆಯಲ್ಲಿಯೇ ಕುಳಿತು ಇಲ್ಲವೇ ವಕೀಲರ ಕಚೇರಿಯಲ್ಲಿ ಕುಳಿತು ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು. ಇದು ದೇಶದಲ್ಲೇ ಮೊದಲ ಪ್ರಯತ್ನವಾಗಿದೆ ಎಂದರು.
Related Articles
Advertisement
ಜಿಲ್ಲೆಯಲ್ಲಿ ಈಗಾಗಲೇ ಇತ್ಯರ್ಥವಾಗದ ಒಟ್ಟು 42,097 ಪ್ರಕರಣಗಳು ಬಾಕಿ ಇವೆ. ಇದರಲ್ಲಿ ಸಿವಿಲ್ 24,245 ಪ್ರಕರಣಗಳು, ಕ್ರಿಮಿನಲ್ 17,852 ಪ್ರಕರಣಗಳಿದ್ದು, ಇವುಗಳನ್ನು ಇ-ಲೋಕ ಅದಾಲತ್‌ನಲ್ಲಿ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ, ಸಿಪಿಒ ಕಡಕೋಳ ಉಪಸ್ಥಿತರಿದ್ದರು.
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳಿಂದ ನ್ಯಾಯಾಲಯದ ಕಾರ್ಯಕಲಾಪ ನಡೆಸಲು ಸಾಧ್ಯವಾಗಿಲ್ಲ. ಸುಮಾರು 8ರಿಂದ 10 ವರ್ಷಗಳ ಹಿಂದೆ ಸಂಭವಿಸಿದ ಅಪಘಾತ ಪ್ರಕರಣಗಳಲ್ಲಿ ಮೃತಪಟ್ಟವರ ವಾರಸುದಾರರಿಗೆ ಪರಿಹಾರ ಕೊಡುವ ಪ್ರಕರಣ ಬಾಕಿ ಇವೆ. ಇಂತಹ ಹಲವು ಬಾಕಿ ಉಳಿದ ಪ್ರಕರಣಗಳನ್ನು ಇ ಮೇಗಾ ಅದಾಲತ್ ಮೂಲಕ ಬಗೆಹರಿಸಿ, ಕೊರೊನಾ ಸಂಕಷ್ಟದಲ್ಲಿರುವ ಜನರಿಗೆ ಪರಿಹಾರ ಕೊಡಿಸುವ ಮೂಲ ಪ್ರಯತ್ನ ಇದಾಗಿದೆ. ಇದಕ್ಕಾಗಿ ಹಲವು ಇನ್ಸುರೆನ್ಸ್ ಕಂಪನಿಗಳ ಮುಖ್ಯಸ್ಥರು, ಹಿರಿಯ ಅಧಿಕಾರಿಗಳ ಜತೆಗೂ ಸಭೆ ನಡೆಸಲಾಗಿದೆ. ಬಾಕಿ ಪ್ರಕರಣಗಳ ಕಕ್ಷಿದಾರರು ಇದರ ಪ್ರಯೋಜನ ಪಡೆಯಬೇಕು. –ನ್ಯಾಯಮೂರ್ತಿ ಅರವಿಂದಕುಮಾರ, ಕಾರ್ಯ ನಿರ್ವಾಹಕ ಅಧ್ಯಕ್ಷರು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು
ಕೋವಿಡ್ ಹಿನ್ನೆಲೆ ವಕೀಲರು, ಕಕ್ಷಿದಾರರು ಕೋಟ್‌ಗೆ ಬಾರದೇ ತಾವಿದ್ದ ಮನೆ, ವಕೀಲರ ಕಚೇರಿಯಲ್ಲೇ ಇ-ಮೇಗಾ ಅದಾಲತ್‌ನಲ್ಲಿ ಭಾಗವಹಿಸಲು ಅವಕಾಶವಿದೆ. ಜಿಲ್ಲೆಯಲ್ಲಿ 42,097 ಪ್ರಕರಣ ಬಾಕಿ ಇದ್ದು, ಸೆ. 18ರವರೆಗೆ ಇ ಮೇಗಾ ಅದಾಲತ್‌ನಲ್ಲಿ ಭಾಗಿಯಾಗಿಲು ನೋಂದಾಯಿಸಕೊಳ್ಳಬಹುದು. ಸೆ. 19ರಂದು ಜಿಲ್ಲೆಯ ಎಲ್ಲ ಕೋರ್ಟ್‌ಗಳಲ್ಲೂ ಇ ಮೇಗಾ ಅದಾಲತ್ ನಡೆಯಲಿದೆ. – ಕಲ್ಪನಾ ಎಂ. ಕುಲಕರ್ಣಿ, ಪ್ರಧಾನ ಜಿಲ್ಲಾ , ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಾಗಲಕೋಟೆ