ದಾವಣಗೆರೆ: ರಾಷ್ಟ್ರೀಯ ಬೃಹತ್ ಇ-ಲೋಕ ಅದಾಲತ್ ಡಿ. 19ರಂದು ನಡೆಯಲಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ. ಗೀತಾ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳಪ್ರಾಧಿಕಾರದ ನಿರ್ದೇಶನದಂತೆ ಡಿ. 19 ರಂದು ಜಿಲ್ಲೆಯಲ್ಲಿ ಇ- ಲೋಕ ಅದಾಲತ್‌ಆಯೋಜಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿಪಕ್ಷಗಾರರು ಇ-ಲೋಕ ಅದಾಲತ್‌ನಲ್ಲಿ ವಿಡಿಯೋ ಕಾನ್ಫರೆನ್ಸ್, ವಿಡಿಯೋ ಕಾಲ್ ಮೂಲಕಹಾಗೂ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ನ್ಯಾಯಾಲಯಕ್ಕೆ ಬಂದು ಕೂಡ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದರು.
ಅಪಘಾತಕ್ಕೆ ಸಂಬಂಧಿಸಿದ ಪರಿಹಾರ ಪ್ರಕರಣಗಳು, ಪಾಲುವಿಭಾಗ ಕೋರಿ ಸಲ್ಲಿಸುವ ದಾವೆಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನಶುಲ್ಕಗಳು, ಮೆಂಟೆನೆನ್ಸ್ ಪ್ರಕರಣಗಳು, ಜೀವನಾಂಶದ ಅರ್ಜಿ ಪ್ರಕರಣಗಳು, ಕೌಟುಂಬಿಕ(ವಿಚ್ಛೇದನ ಹೊರತುಪಡಿಸಿ) ಕಲಹಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇ- ಲೋಕ ಅದಾಲತ್ ಮೂಲಕ ಇತ್ಯರ್ಥ ಪಡಿಸಬಹುದಾಗಿದೆ ಎಂದರು.
ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಅಪರಾಧ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿಪ್ರಕರಣಗಳು, ಕಂದಾಯ ಪ್ರಕರಣಗಳು (ಜಿಲ್ಲಾ ಹಾಗೂ ಉಚ್ಚ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ), ಸಿವಿಲ್ ಪ್ರಕರಣಗಳನ್ನು ( ಬಾಡಿಗೆ, ಅನುಭೋಗದ ಹಕ್ಕುಗಳ ನಿರ್ಬಂಧಾಜ್ಞೆ ಮೊಕದ್ದಮೆಗಳು) ಲೋಕ ಅದಾಲತ್‌ನಲ್ಲಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಸಾಬಪ್ಪ ಮಾತನಾಡಿ, ಇ- ಲೋಕ ಅದಾಲತ್ ಬಡವರಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಎಚ್. ಅರುಣ್‌ಕುಮಾರ್, ಪ್ರತಿ ಬಾರಿ ಲೋಕ ಅದಾಲತ್ ಮೂಲಕ ಹೆಚ್ಚು ಪ್ರಕರಣಗಳುಇತ್ಯರ್ಥವಾಗುತ್ತಿದೆ. ಸತತ ಮೂರು ವರ್ಷಗಳಿಂದ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ ಎಂದರು.
ಕಳೆದ ಬಾರಿ ಸೆ. 9ರಂದು ವಿಡಿಯೋ ಕಾನ್ಫರೆನ್ಸ್, ಮೊಬೈಲ್ ವಿಡಿಯೋ ಕಾಲ್ ಮೂಲಕ ನಡೆದ ಇ-ಲೋಕ್ ಅದಾಲತ್ ನಲ್ಲಿ ಜಿಲ್ಲೆಯಲ್ಲಿ 1492 ಪ್ರಕರಣಗಳುಇತ್ಯರ್ಥಗೊಂಡು 4,47,22,331 ರೂ. ಗಳ ಪರಿಹಾರ ಒದಗಿಸಲಾಗಿದೆ. ಇದಕ್ಕೆಸಹಕರಿಸಿದ ಎಲ್ಲ ಕಕ್ಷಿಗಾರರು ಮತ್ತು ವಕೀಲರಿಗೆ ಅಭಿನಂದಿಸುತ್ತೇನೆ. –
ಕೆ.ಬಿ. ಗೀತಾ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು